2022-23ನೇ ಸಾಲಿನ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಕೃಪಾಂಕ ನೀಡಲಿದೆ ಎನ್ನಲಾಗಿದೆ. ಕೋವಿಡ್ ಕಾರಣದಿಂದಾಗಿ ಕಳೆದ ವರ್ಷ ಎಸ್ಎೆಸ್ಎಷಲ್ಸಿೂ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲಾಗಿತ್ತು. ಇದೇ ಕೃಪಾಂಕವನ್ನು ಈ ವರ್ಷವೂ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಒಟ್ಟಾರೆ ಕನಿಷ್ಠ ಅಂಕ ಗಳಿಸುವ ಎಸ್ಎಪಸ್ ಎಲ್ಸಿಷ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇ.5ರಷ್ಟು ಕೃಪಾಂಕವನ್ನು ನೀಡಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.