Publish Date: Wed, 28 Mar 2018 (18:41 IST)
Updated Date: Wed, 28 Mar 2018 (18:43 IST)
ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ರುದ್ರೇಗೌಡರಿಗೆ ಬಿಜೆಪಿ ಟಿಕೆಟ್ ನೀಡಿದರೆ ನಾನೇ ಮುಂದೆ ನಿಂತು ಗೆಲ್ಲಿಸುವುದಕ್ಕೆ ಓಡಾಟ ನಡೆಸುತ್ತೇನೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿ ಹೇಳಲಿ ಪರಮೇಶ್ವರ ನ್ನ ಸೋಲಿಸಿದ್ದ ನಾನು ಅಲ್ಲವೆಂದು ಅಂತ ಸವಾಲು ಹಾಕಿದರು.
ರಾಜ್ಯದಲ್ಲಿ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಿದೆ. ಎಪ್ರಿಲ್ 3 ರಂದು ಕಾಗಿನಲೆಯಲ್ಲಿ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ ನಡೆಯಲಿದೆ ಎಂದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉದ್ಘಾಟಿಸಲಿದ್ದಾರೆ. ಕಾಗಿನೆಲೆಯಲ್ಲಿ ಸುಮಾರು 3 ರಿಂದ 5 ಲಕ್ಷಜನರು ಸೇರುವ ನಿರೀಕ್ಷೆಯಿದೆ.
ಚುನಾವಣೆ ವೇಳೆ ಘೋಷಣೆಯಾಗಿದ್ದ ಭರವಸೆಗಳನ್ನು ಸಿದ್ದರಾಮಯ್ಯ ಸರ್ಕಾರ ಈಡೇರಿಸಿಲ್ಲ. ಹಿಂದುಳಿದ ವರ್ಗಗಳ ಜನರಿಗೆ ಸರ್ಕಾರ ಯಾವುದೇ ರೀತಿ ಅಭಿವೃದ್ಧಿ ಮಾಡಿಲ್ಲ. ನಾವು ಹಿಂದುಳಿದ ವರ್ಗಗಳ ಪರ ಸರ್ಕಾರ ಎಂದು ಸಿದ್ದರಾಮಯ್ಯ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿದ್ದ ವೇಳೆ ಹಿಂದುಳಿದ ವರ್ಗಗಳಿಗೆ ಸಾಕಷ್ಟು ಹಣವನ್ನು ಬಿಡುಗಡೆ ಮಾಡಲಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಯಾದಾಗ ಹಿಂದುಳಿದ ವರ್ಗಗಳಿಗೆ ಎಷ್ಟು ಹಣ ಬಿಡುಗಡೆ ಮಾಡಿದ್ದೇವೆ ಎಂದು ಶ್ವೇತಪತ್ರ ಹೊರಡಿಸಲಿ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.