ಪರಮೇಶ್ವರರನ್ನು ಸೋಲಿಸಿದ್ದು ನಾನಲ್ಲ ಅಂತ ಸಿಎಂ ಆಣೆ ಮಾಡಲಿ: ಕೆ.ಎಸ್.ಈಶ್ವರಪ್ಪ ಸವಾಲು

Webdunia
ಬುಧವಾರ, 28 ಮಾರ್ಚ್ 2018 (18:41 IST)
ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ರುದ್ರೇಗೌಡರಿಗೆ ಬಿಜೆಪಿ  ಟಿಕೆಟ್ ನೀಡಿದರೆ ನಾನೇ ಮುಂದೆ ನಿಂತು ಗೆಲ್ಲಿಸುವುದಕ್ಕೆ ಓಡಾಟ ನಡೆಸುತ್ತೇನೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿ ಹೇಳಲಿ ಪರಮೇಶ್ವರ ನ್ನ ಸೋಲಿಸಿದ್ದ ನಾನು ಅಲ್ಲವೆಂದು ಅಂತ ಸವಾಲು ಹಾಕಿದರು. 
 
ರಾಜ್ಯದಲ್ಲಿ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಿದೆ. ಎಪ್ರಿಲ್ 3 ರಂದು ಕಾಗಿನಲೆಯಲ್ಲಿ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ ನಡೆಯಲಿದೆ ಎಂದರು.  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉದ್ಘಾಟಿಸಲಿದ್ದಾರೆ. ಕಾಗಿನೆಲೆಯಲ್ಲಿ ಸುಮಾರು 3 ರಿಂದ 5 ಲಕ್ಷಜನರು ಸೇರುವ ನಿರೀಕ್ಷೆಯಿದೆ.
 
ಚುನಾವಣೆ ವೇಳೆ ಘೋಷಣೆಯಾಗಿದ್ದ ಭರವಸೆಗಳನ್ನು ಸಿದ್ದರಾಮಯ್ಯ ಸರ್ಕಾರ ಈಡೇರಿಸಿಲ್ಲ. ಹಿಂದುಳಿದ ವರ್ಗಗಳ ಜನರಿಗೆ ಸರ್ಕಾರ ಯಾವುದೇ ರೀತಿ ಅಭಿವೃದ್ಧಿ ಮಾಡಿಲ್ಲ. ನಾವು ಹಿಂದುಳಿದ ವರ್ಗಗಳ ಪರ ಸರ್ಕಾರ ಎಂದು ಸಿದ್ದರಾಮಯ್ಯ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿದ್ದ ವೇಳೆ ಹಿಂದುಳಿದ ವರ್ಗಗಳಿಗೆ ಸಾಕಷ್ಟು ಹಣವನ್ನು ಬಿಡುಗಡೆ ಮಾಡಲಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಯಾದಾಗ ಹಿಂದುಳಿದ ವರ್ಗಗಳಿಗೆ ಎಷ್ಟು ಹಣ ಬಿಡುಗಡೆ ಮಾಡಿದ್ದೇವೆ ಎಂದು ಶ್ವೇತಪತ್ರ ಹೊರಡಿಸಲಿ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments