Select Your Language

Notifications

webdunia
webdunia
webdunia
webdunia

ಹೈಕಮಾಂಡ್ ಗೂ ಕ್ಯಾರೇ ಎನ್ನದ ಕೆ.ಎಸ್. ಈಶ್ವರಪ್ಪ

ಹೈಕಮಾಂಡ್ ಗೂ ಕ್ಯಾರೇ ಎನ್ನದ ಕೆ.ಎಸ್. ಈಶ್ವರಪ್ಪ
Bangalore , ಮಂಗಳವಾರ, 2 ಮೇ 2017 (09:44 IST)
ಬೆಂಗಳೂರು: ಬಿಜೆಪಿಯಲ್ಲಿ ನಡೆಯುತ್ತಿರುವ ಒಳ ಜಗಳ ಸದ್ಯಕ್ಕೆ ಶಮನವಾಗುವ ಲಕ್ಷಣವಿಲ್ಲ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೂ ಸಡ್ಡು ಹೊಡೆಯಲು ತೀರ್ಮಾನಿಸಿದಂತೆ ತೋರುತ್ತಿದೆ.

 
ಮೊನ್ನೆಯಷ್ಟೇ ಯಡಿಯೂರಪ್ಪ ಮತ್ತು ಈಶ್ವರಪ್ಪ ಬಣಗಳಿಗೆ ಸರಿಯಾಗಿ ಚುರುಕು ಮುಟ್ಟಿಸಿದ್ದ ಅಮಿತ್ ಶಾ, ಭಿನ್ನಮತದ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಮತ್ತು ಅಂತಹ ಸಮಾವೇಶಗಳನ್ನು ನಡೆಸಬಾರದು ಎಂದು ಎಚ್ಚರಿಕೆ ನೀಡಿದ್ದರು.

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಅದರ ಬಗ್ಗೆ ಗಮನ ಹರಿಸುವುದನ್ನು ಬಿಟ್ಟು ಈಶ್ವರಪ್ಪ ಬಣ ಮತ್ತೆ ತೊಡೆ ತಟ್ಟಲು ಸಿದ್ಧವಾಗಿದೆ. ರಾಯಚೂರಿನ ಹರ್ಷಿತಾ ಗಾರ್ಡನ್ ನಲ್ಲಿ ಮೇ 7  ಮತ್ತು 8 ರಂದು ರಾಯಣ್ಣ ಬ್ರಿಗೇಡ್ ಕಾರ್ಯಕಾರಿಣಿ ನಡೆಸಲು ಸಿದ್ಧತೆ ನಡೆಸಿದ್ದಾರೆ.

ಈಶ್ವರಪ್ಪ ಖುದ್ದಾಗಿ ಸಿದ್ಧತೆಗಳನ್ನು ಪರಿಶೀಲಿಸಿದರು. ಇದರೊಂದಿಗೆ ಮತ್ತೊಮ್ಮೆ ರಾಜ್ಯ ಬಿಜೆಪಿ ಒಳ ಜಗಳ ತಾರಕಕ್ಕೇರುವ ಎಲ್ಲಾ ಲಕ್ಷಣ ಕಾಣುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ದಾಳಿ ನಡೆಸಲು ಅಧಿಕಾರಿಗಳು ಬರುವಾಗ ಪೆಟ್ರೋಲ್ ಬಂಕ್ ನಾಪತ್ತೆ!