ಯಾರು ಏನು ಹೇಳಲಿ, ಈಶ್ವರಪ್ಪ ನಾಮಪತ್ರ ಸಲ್ಲಿಸುವುದು ಫಿಕ್ಸ್

Krishnaveni K
ಮಂಗಳವಾರ, 26 ಮಾರ್ಚ್ 2024 (16:01 IST)
ಶಿವಮೊಗ್ಗ: ಪುತ್ರ ಕಾಂತೇಶ್ ಗೆ ಟಕೆಟ್ ಸಿಗದ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ರೊಚ್ಚಿಗೆದ್ದಿರುವ ಹರಿ ಹರ ಬ್ರಹ್ಮಾದಿಗಳು ಬಂದರೂ ನಾನು ಸ್ಪರ್ಧೆ ಮಾಡುವುದು ಖಚಿತ ಎಂದಿದ್ದಾರೆ.

ಹಾವೇರಿಯಲ್ಲಿ ಪುತ್ರ ಕಾಂತೇಶ್ ಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಕೆಎಸ್ ಈಶ್ವರಪ್ಪ ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಅಸಮಾಧಾನಗೊಂಡಿರುವ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಪ್ರಯತ್ನ ನಡೆಸುತ್ತಲೇ ಇದ್ದಾರೆ.

ಆದರೆ ಇದು ಯಾವುದಕ್ಕೂ ಸೊಪ್ಪು ಹಾಕಲ್ಲ. ಹರಿಹರ ಬ್ರಹ್ಮಾದಿಗಳು ಬಂದರೂ ನಾನು ಸ್ಪರ್ಧೆ ಮಾಡುವುದು ಖಚಿತ ಎಂದಿದ್ದಾರೆ. ಅಷ್ಟೇ ಅಲ್ಲ, ನಾಮಪತ್ರ ಸಲ್ಲಿಕೆಗೂ ದಿನಾಂಕ ನಿಗದಿಪಡಿಸಿಕೊಂಡಿದ್ದಾರಂತೆ.  ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬಿವೈ ರಾಘವೇಂದ್ರರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದೆ. ಆದರೆ ಈಶ್ವರಪ್ಪ ಸ್ಪರ್ಧಿಸಿದರೆ ಮತ ವಿಭಜನೆಯಾಗಲಿದೆ. ಇದರಿಂದ ಈಶ್ವರಪ್ಪ ಸೋಲುತ್ತಾರೋ, ಗೆಲ್ಲುತ್ತಾರೋ ಬಿಜೆಪಿ ಅಭ್ಯರ್ಥಿ ಗೆಲುವಿಗೆ ತೊಂದರೆಯಾಗಲಿದೆ. ಹೀಗಾಗಿ ಬಿಜೆಪಿಗೆ ಈಶ್ವರಪ್ಪ ತಲೆನೋವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments