Webdunia - Bharat's app for daily news and videos

Install App

ಬಿಜೆಪಿ ಸೇರ್ಪಡೆ ಬಗ್ಗೆ ಅಪ್‌ಡೇಟ್‌ ನೀಡಿದ ಕೆ.ಎಸ್‌.ಈಶ್ವರಪ್ಪ: ಬಿಎಸ್‌ವೈಯನ್ನು ಹಾಡಿ ಹೊಗಳಿದ ಮಾಜಿ ಡಿಸಿಎಂ

Sampriya
ಶನಿವಾರ, 21 ಜೂನ್ 2025 (15:03 IST)
Photo Credit X
ಬೆಂಗಳೂರು: ಭಾರತೀಯ ಜನತಾ ಪಕ್ಷ ಸೇರ್ಪಡೆ ಕುರಿತಂತೆ ಪಕ್ಷದಿಂದ ಉಚ್ಚಾಟನೆಗೊಂಡಿರುವ ನಾಯಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಅಪ್‌ಡೇಟ್‌ ನೀಡಿದ್ದಾರೆ. 

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ನಾನು ಬಿಜೆಪಿಗೆ  ಮರಳುವುದಿಲ್ಲ. ಮೊದಲು ಬಿಜೆಪಿಯಲ್ಲಿನ ಪರಿಸ್ಥಿತಿ ಸರಿ ಹೋಗಬೇಕು ಎನ್ನುವ ಮೂಲಕ ತನ್ನ ಮಾತೃ ಪಕ್ಷದ ಬಗ್ಗೆ ಮೃದುವಾಗಿ ಮಾತನಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಭೇಟಿ ನೀಡಿದ ಬೆನ್ನಲ್ಲೆ ಈಶ್ವರಪ್ಪ ಹೇಳಿಕೆ ಮಹತ್ವ ಪಡೆದಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಆಹ್ವಾನ ಕೊಟ್ಟಿರುವ ಬಗ್ಗೆ ಗೊತ್ತಿಲ್ಲ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನನ್ನ ಮತ್ತು ಬಿ.ಎಸ್‌.    ಯಡಿಯೂರಪ್ಪ ಸ್ನೇಹ ಬಹಳ ಹಳೆಯದು. ನಾವಿಬ್ಬರೂ ಪಾರ್ಟ್‌ನರ್‌ಶಿಪ್‌ನಲ್ಲಿ ಹಿಂದೆ ಫ್ಯಾಕ್ಟರಿ ಮಾಡಿದ್ದೆವು. ನಮ್ಮಿಬ್ಬರ ಮಧ್ಯೆ ಸ್ನೇಹ ಮುಂದುವರೀತಿದೆ. ರಾಜಕಾರಣಕ್ಕೂ ಸ್ನೇಹಕ್ಕೂ ಸಂಬಂಧ ಇಲ್ಲ. ನನ್ನ ಹುಟ್ಟುಹಬ್ಬಕ್ಕೆ ಪತ್ರಿಕೆಯಲ್ಲೂ ಅವರು ಶುಭಾಶಯ ಕೋರಿಕೆ ಹಾಕಿಸಿದ್ದರು. ನಮ್ಮ ಮನೆಯ ಕಾರ್ಯಕ್ರಮಗಳಿಗೆ ಅವರು ಬಂದಿದ್ದಾರೆ. ಅವರ ಮನೆ ಕಾರ್ಯಕ್ರಮಗಳಿಗೆ ನಾವು ಹೋಗಿದ್ದೇವೆ. ಸ್ನೇಹ ಬೇರೆ ರಾಜಕಾರಣ ಬೇರೆ ಎಂದರು..  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಮುಂದಿನ ಸುದ್ದಿ
Show comments