Webdunia - Bharat's app for daily news and videos

Install App

ಸಿಎಂ ಭೇಟಿ ಮಾಡಿದ ಕೆ ಎಸ್ ಈಶ್ವರಪ್ಪ

Webdunia
ಶುಕ್ರವಾರ, 3 ಫೆಬ್ರವರಿ 2023 (17:04 IST)
ಆರ್.ಟಿ ನಗರದಲ್ಲಿರುವ ಸಿಎಂ ಬೊಮ್ಮಾಯಿ ಅವರ ಖಾಸಗಿ ನಿವಾಸಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದರು.  ಈ ವೇಳೆ ಮುಖ್ಯಮಂತ್ರಿಗಳ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಶಿವಮೊಗ್ಗ ಪ್ರವಾಸಕ್ಕೆ ಸಿಎಂ ಆಗಮಿಸುತ್ತಿರುವ ಕುರಿತು ಮಾತುಕತೆ ನಡೆಯಿತು. ಇದರ ಜೊತೆಯಲ್ಲಿಯೇ ಸಚಿವ ಸಂಪುಟ ವಿಸ್ತರಣೆ ವಿಷಯದ ಕುರಿತು ಪ್ರಸ್ತಾಪವಾಯಿತು. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ನಿರ್ಧಾರವಾಗಲಿದೆ ನಿಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎನ್ನುವ ಮುಖ್ಯಮಂತ್ರಿಗಳ ಹೇಳಿಕೆಗೆ ಈಶ್ವರಪ್ಪ ಅಸಹನೆಗೊಂಡರು. ಈ ವೇಳೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ ಇನ್ಮುಂದೆ ನನ್ನನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟವಾಗಿ ಸಿಎಂ ಗೆ ತಿಳಿಸಿದ್ದೇನೆ. ಇನ್ನೂ  ರಾಜಕಾರಣದಲ್ಲಿ ಏನೇನು ಆಗುತ್ತದೆ ಅಂತಾ ಯಾರಿಗೂ ಗೊತ್ತಾಗಲ್ಲ, ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಳ್ಳುತ್ತಾನೆ ಅಂತಾ ಕನಸು ಬಿದ್ದಿತ್ತಾ? ಅವರು ಮಲಗಿದ್ದು ಒಂದು ಕಡೆ ಪತ್ರ ಸಿಕ್ಕಿದ್ದು ಮತ್ತೊಂದು ಕಡೆ ಆದರೂ ಈ ಪ್ರಕರಣದಲ್ಲಿ ನನ್ನ ಮೇಲೆ ಆರೋಪ ಬಂತು, ನಂತರ ಸಚಿವ ಸ್ಥಾನಕ್ಕೆ ನಾನು ರಾಜೀನಾಮೆಯನ್ನೂ ನೀಡಬೇಕಾಯಿತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments