ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

Krishnaveni K
ಮಂಗಳವಾರ, 9 ಡಿಸೆಂಬರ್ 2025 (11:38 IST)
ಬೆಂಗಳೂರು: ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಅಳವಡಿಸಬೇಕು ಎಂದಿದ್ದಕ್ಕೆ ವಿರೋಧಿಸಿದ್ದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆಎಸ್ ಈಶ್ವರಪ್ಪ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ ಎಂದಿದ್ದಾರೆ.

ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಅಳವಡಿಸಬೇಕು ಎಂದಿದ್ದ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ‘ಕುಮಾರಸ್ವಾಮಿವರು ಬಿಜೆಪಿ ಸೇರಿಕೊಂಡ ಮೇಲೆ ಮನುವಾದಿಗಳಾಗಿದ್ದಾರೆ’ ಎಂದಿದ್ದರು.

ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಎಸ್ ಈಶ್ವರಪ್ಪ ‘ಸ್ವತಃ ಮಹಾತ್ಮಾ ಗಾಂಧೀಜಿಯವರೇ ಭಗವದ್ಗೀತೆಯನ್ನು ಹೊಗಳಿದ್ದರು. ಆದರೆ ಸಿದ್ದರಾಮಯ್ಯ ಹೇಳಿಕೆ ಸೈದ್ಧಾಂತಿಕ ದಿವಾಳಿತನ ತೋರಿಸುತ್ತದೆ. ಯಾರೋ ಹೇಳಿಕೊಟ್ಟಿದ್ದನ್ನು ಕೇಳಿ ಕಮ್ಯುನಿಷ್ಟ್ ಸಿದ್ಧಾಂತವನ್ನು ತುಂಬಿಕೊಂಡಿರುವ ಅವರು ಒಮ್ಮೆ ಭಗವದ್ಗೀತೆಯನ್ನು ಓದಲಿ. ಇದು ಕೇವಲ ಹಿಂದೂಗಳು ಓದಬೇಕಾದ ಧರ್ಮಗ್ರಂಥವಲ್ಲ’ ಎಂದಿದ್ದಾರೆ.

‘ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ಬೈಬಲ್, ಕುರಾನ್ ಬಗ್ಗೆಯೂ ಇದೇ ರೀತಿ ಹೇಳಿಕೆ ನೀಡಲಿ. ನಂತರ ಅವರು ಅಧಿಕಾರಕ್ಕೇ ಬರಲ್ಲ. ಮತ ಬ್ಯಾಂಕ್ ಗಾಗಿ ಓಲೈಕೆ ರಾಜಕಾರಣ ಮಾಡುವುದನ್ನು ಬಿಟ್ಟು ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments