Select Your Language

Notifications

webdunia
webdunia
webdunia
webdunia

ಕೆಎಸ್ ಆರ್ ಟಿಸಿ ಬಸ್ ಪಲ್ಟಿ; ಏಳು ಮಂದಿ ಪ್ರಯಾಣಿಕರ ದುರ್ಮರಣ

ಕೆಎಸ್ ಆರ್ ಟಿಸಿ ಬಸ್ ಪಲ್ಟಿ; ಏಳು ಮಂದಿ ಪ್ರಯಾಣಿಕರ ದುರ್ಮರಣ
ಬೆಂಗಳೂರು , ಬುಧವಾರ, 30 ಅಕ್ಟೋಬರ್ 2019 (10:23 IST)
ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳ್ಳಂಬೆಳಿಗ್ಗೆ ನೆಲಮಂಗಲದ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.



ಪುತ್ತೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಓವರ್ ಸ್ಪೀಡ್ ನಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ.

 

ಈ ಘಟನೆಯಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಲೋಕಯುಕ್ತ ನ್ಯಾಯಾಮೂರ್ತಿ ಎನ್ ವೆಂಕಟಾಲ ನಿಧನ