Webdunia - Bharat's app for daily news and videos

Install App

KSCA ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕಿದೆ: ಬೊಮ್ಮಾಯಿ

Webdunia
ಶನಿವಾರ, 11 ಸೆಪ್ಟಂಬರ್ 2021 (08:36 IST)
ಬೆಂಗಳೂರು (ಸೆ 11) :  ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕುವುದರ ಜೊತೆಗೆ ಇತರೆ ಕ್ರೀಡೆಗಳಿಗೂ ಆ ಸಂಸ್ಕೃತಿಯನ್ನು ಅನುಷ್ಠಾನಕ್ಕೆ ತರಲು ಪ್ರೇರಣೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್ ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, " ಚಿನ್ನಸ್ವಾಮಿ ಕ್ರಿಕೆಟ್ ಮೈದಾನ ಇಷ್ಟು ಅಚ್ಚುಕಟ್ಟಾಗಿ ಇರುವುದನ್ನು ನೋಡಿ ಬಹಳಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ ಅಚ್ಚುಕಟ್ಟುತನದ ಸಂಸ್ಕೃತಿ ಬೆಂಗಳೂರಿನಲ್ಲಿ ಫುಟ್ಬಾಲ್, ಹಾಕಿ ಕ್ರೀಡಾಂಗಣಗಳು ಉತ್ತಮವಾಗಿ ರೂಪುಗೊಳ್ಳಲು ಕಾರಣವಾಗಿವೆ. ಇಡೀ ಕ್ರೀಡಾ ಕ್ಷೇತ್ರದಲ್ಲಿ ಕೆ.ಎಸ್.ಸಿ.ಎ ತನ್ನ ಪ್ರಭಾವವನ್ನು ಬೀರಿದೆ. ಇದರ ಶ್ರೇಯಸ್ಸು ಕೆ.ಎಸ್.ಸಿ.ಎ ಗೆ ಸೇರಬೇಕು" ಎಂದರು.
ಕೆ.ಎಸ್.ಸಿ.ಎ ಗೆ ಬಹಳ ದೊಡ್ಡ ಇತಿಹಾಸವಿದೆ. ಕ್ರಿಕೆಟ್ ದಿಗ್ಗಜರೆಲ್ಲಾ ಇಲ್ಲಿ ಆಟ ಆಡಿದ್ದಾರೆ. ರೋಚಕ ಕ್ರಿಕೆಟ್ ಪಂದ್ಯಗಳನ್ನು ಕೆ.ಎಸ್.ಸಿ.ಎ ನಲ್ಲಿ ವೀಕ್ಷಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಇಂದು ಕ್ರೀಡಾಂಗಣದಲ್ಲಿ ಸರ್ವ ಸೌಲಭ್ಯಗಳೂ ಇವೆ. ಇಂದು ಯೂನಿಪೋಲ್ ನಿರ್ಮಿಸಿ ಅಂತರರಾಷ್ಟ್ರೀಯ ಮಟ್ಟದ ಲೈಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.ಹಳೇ ಚಿತ್ರಗಳನ್ನು ಪ್ರದರ್ಶಿಸಿರುವುದು ಕ್ರಿಕೆಟ್ ಚರಿತ್ರೆಯನ್ನು ಸ್ಮರಿಸಿದಂತಾಗುತ್ತದೆ. ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ.
ಕೆ.ಎಸ್.ಸಿ.ಎ ನಲ್ಲಿ ಆತ್ಮೀಯತೆ ಇದ್ದು, ಉತ್ತಮ ವಾತಾವರಣವಿದೆ. ಮಾಜಿ ಕ್ರಿಕೆಟಿಗರ ಬಗ್ಗೆ ಗೌರವ, ಮನ್ನಣೆ ಸಹ ಇರುವುದು ಒಂದು ಅತ್ಯುತ್ತಮ ಪರಂಪರೆ. ಹುಬ್ಬಳ್ಳಿಯಲ್ಲಿ ಅತ್ಯುತ್ತಮ ಕ್ರೀಡಾಂಗಣ ನಿರ್ಮಾಣವಾಗಿದ್ದು, ಅಲ್ಲಿ ಒಂದು ಅಂತರರಾಷ್ಟ್ರೀಯ ಪಂದ್ಯವನ್ನು ಏರ್ಪಡಿಸುವುದನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಕೆ.ಎಸ್.ಸಿ.ಎ ಬ್ರಾಂಡ್ ಬೆಂಗಳೂರಿನ ಮೌಲ್ಯವನ್ನು ಹೆಚ್ಚಿಸುತ್ತಿದೆ.
ಇಂಗ್ಲೆಂಡಿನ ಲಾರ್ಡ್ಸ್ ಕ್ರೀಡಾಂಗಣದವನ್ನು ವೀಕ್ಷಿಸಲು ಸಾರ್ವಜನಿಕರಿಗೆ ಶುಲ್ಕ ವಿಧಿಸುವ ಮಾದರಿಯಲ್ಲಿಯೇ ಕೆ.ಎಸ್.ಸಿ.ಎ ಕ್ರೀಡಾಂಗಣ ವೀಕ್ಷಣೆಗೆ ಶುಲ್ಕ ವಿಧಿಸಿದರೆ ಆದಾಯವೂ ಬರುತ್ತದೆ. ಕ್ರೀಡಾಂಗಣ ವನ್ನು ಅತ್ಯುತ್ತಮವಾಗಿ ನಿರ್ವಹಿಸಿ, ನವೀನ ಆಲೋಚನೆಗಳನ್ನು  ಕಾರ್ಯಗತಗೊಳಿಸುವಂತಾಗಲಿ" ಎಂದು ಬಸವರಾಜ ಬೊಮ್ಮಾಯಿ ಆಶಿಸಿದರು.
ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ರೇಷ್ಮೆ ಸಚಿವ ನಾರಾಯಣಗೌಡ, ಮುನಿರತ್ನ, ಕೆ.ಎಸ್.ಸಿ.ಎ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಸಂತೋಷ್ ಮೆನನ್, ವಿನಯ ಮೃತ್ಯುಂಜಯ ಮೊದಲಾದವರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments