Select Your Language

Notifications

webdunia
webdunia
webdunia
webdunia

ಕೆಎಸ್ಸಾರ್ಟಿಸಿ ಬಸ್ ದರ ಏರಿಕೆ ಇಲ್ಲ: ಸಾರಿಗೆ ಸಚಿವ ಸವದಿ ಸ್ಪಷ್ಟನೆ

ಕೆಎಸ್ಸಾರ್ಟಿಸಿ ಬಸ್ ದರ ಏರಿಕೆ ಇಲ್ಲ: ಸಾರಿಗೆ ಸಚಿವ ಸವದಿ ಸ್ಪಷ್ಟನೆ
bangalore , ಮಂಗಳವಾರ, 6 ಜುಲೈ 2021 (14:12 IST)
ಕೊರೊನಾದಿಂದ ಸಾರಿಗೆ ನಿಗಮಕ್ಕೆ ನಷ್ಟ ಆಗಿರುವುದು ನಿಜ. ಆದರೆ ಜನರು ಸಹ ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಆದ್ದರಿಂದ ಕೆಎಸ್ಸಾರ್ಟಿಸಿ ಬಸ್ ದರ ಏರಿಕೆ ಇಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಪಡಿಸಿದ್ದಾರೆ.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಬಸ್ಗಳ ಪ್ರಯಾಣ ದರ ಏರಿಕೆ ಬೇಡ ಎಂದು ತೀರ್ಮಾನಿಸಿದ್ದೇವೆ ಎಂದರು.
ಸಾರಿಗೆ ನೌಕರರ ಮುಷ್ಕರದ ಎಚ್ಚರಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರಕಾರ 9 ಬೇಡಿಕೆಯಲ್ಲಿ 8 ಬೇಡಿಕೆ ಈಡೇರಿಸಿದೆ. ವೇತನ ಪರಿಷ್ಕರಣೆ ಸದ್ಯದ ಪರಿಶೀಲನೆ ಆಗಲ್ಲ. ಸರ್ಕಾರಕ್ಕೆ ಬರುತ್ತಿರುವ ಹಣ ನಿಗಮದ ನಿರ್ವಹಣೆಗೆ ಕಷ್ಟ ಇದೆ. ಹಾಗಾಗಿ ಸದ್ಯಕ್ಕೆ ವೇತನ ಹೆಚ್ಚಳ ಕಷ್ಟ ಎಂದು ಅವರು ಪುನರುಚ್ಚರಿಸಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕೆಲ ಶಾಸಕರ ವೈಯಕ್ತಿಕ ಅಭಿಪ್ರಾಯ ಅಷ್ಟೆ.  ಹೈಕಮಾಂಡ್ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಆದರೂ ಕೆಲವರು ಅಲ್ಲಿ ಇಲ್ಲಿ ಮಾತನಾಡುತ್ತಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ, ಪಕ್ಷದ ಅಭಿಪ್ರಾಯ ಅಲ್ಲ ಎಂದು ಸವದಿ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನ ಲಾಕ್ ಡೌನ್ ಸಮಯದಲ್ಲಿ ನಮ್ಮ ಮೆಟ್ರೋ ಸಂಸ್ಥೆ ಅನುಭವಿಸಿದ ನಷ್ಟವೆಷ್ಟು ???