Select Your Language

Notifications

webdunia
webdunia
webdunia
webdunia

ನವರಾತ್ರಿಗೆ KSRTC ಬಂಪರ್ ಆಫರ್

ನವರಾತ್ರಿಗೆ KSRTC ಬಂಪರ್ ಆಫರ್
bangalore , ಶುಕ್ರವಾರ, 30 ಸೆಪ್ಟಂಬರ್ 2022 (20:41 IST)
ಕರ್ನಾಟಕ ಸೇರಿ ದೇಶದಾದ್ಯಂತ  ಸಡಗರ-ಸಂಭ್ರಮದ ನವರಾತ್ರಿ ಉತ್ಸವ ಪ್ರಾರಂಭವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಸಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಪ್ರವಾಸಿಗರು ಮತ್ತು ಭಕ್ತರ ಅನುಕೂಲಕ್ಕಾಗಿ KSRTC ಇದೇ ಮೊದಲ ಬಾರಿಗೆ ಅತ್ಯುತ್ತಮ ಟೂರ್ ಪ್ಯಾಕೇಜ್ ಪರಿಚಯಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗವು ಮಂಗಳೂರು ದಸರಾ ದರ್ಶನಕ್ಕಾಗಿ ಪ್ಯಾಕೇಜ್ ಟೂರ್ ಆಯೋಜಿಸಿದೆ. ಇಂದಿನಿಂದ ಅಕ್ಟೋಬರ್ 5ರವರೆಗೆ ನವರಾತ್ರಿ ಹಬ್ಬದ ಎಲ್ಲಾ ದಿನಗಳಲ್ಲಿ 1 ದಿನದ ಪ್ರವಾಸ ಪ್ಯಾಕೇಜ್ ಇದಾಗಿದೆ. ಈ ಟೂರ್ ಪ್ಯಾಕೇಜ್‍ನಲ್ಲಿ ಪ್ರವಾಸಿಗರು ದಕ್ಷಿಣ ಕನ್ನಡ ಜಿಲ್ಲೆಯ 9 ಪ್ರಮುಖ ದೇವಾಲಯಗಳ ದರ್ಶನ ಮಾಡಬಹುದಾಗಿದೆ. ಪ್ರವಾಸಿಗರು ಮತ್ತು ಯಾತ್ರಾರ್ಥಿಗಳು ಟಿಕೆಟ್ ಕಾಯ್ದಿರಿಸಿ ನವರಾತ್ರಿಯ ಸಮಯದಲ್ಲಿ ಕರಾವಳಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಬಹುದು. ಈ ಬಗ್ಗೆ KSRTC ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಪ್ರವಾಸ ಪ್ಯಾಕೇಜ್‍ನ ಭಾಗವಾಗಿ ಮಂಗಳಾದೇವಿ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಗುರುಪುರದ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಗಳ ದರ್ಶನ ಮಾಡಬಹುದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಪ್ರವೇಶಿಸಿದ ಭಾರತ್​​​ ಜೋಡೋ ಯಾತ್ರೆ