ಮಂಗಳೂರು: ಕರ್ನಾಟಕ-ಕೇರಳ ಗಡಿ ಭಾಗವಾದ ತಲಪಾಡಿ ಬಳಿ ಕೆಎಸ್ಆರ್ ಟಿಸಿ ಬಸ್ ನಿಯಂತ್ರಣ ತಪ್ಪಿ ಭೀಕರ ದುರಂತ ಸಂಭವಿಸಿದ್ದು ಓರ್ವ ಬಾಲಕಿ ಸೇರಿ ಆರು ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ. ಈ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ.
ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಹಿಂದಕ್ಕೆ ಚಲಿಸಿದ್ದು ಪಕ್ಕದಲ್ಲಿದ್ದ ಬಸ್ ನಿಲ್ದಾಣಕ್ಕೆ ಗುದ್ದಿ ಕೊನೆಗೆ ಅಲ್ಲೇ ನಿಲ್ಲಿಸಿದ್ದ ಪಾದಚಾರಿಗಳು ಆಟೋಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ಮೂವರು ಮಹಿಳೆಯರು, ಓರ್ವ ಬಾಲಕಿ ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ. ಬಸ್ ತಂಗುದಾಣದ ಬಳಿ ಜನರಿದ್ದ ಕಾರಣ 7 ಮಂದಿಗೆ ಗಾಯಗಳೂ ಆಗಿವೆ. ಗಾಯಗೊಂಡವರ ಸ್ಥಿತಿಯೂ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ಸೇರಿಸಲಾಗಿದೆ.
ಘಟನೆಯ ಸಿಸಿಟಿವಿ ವಿಡಿಯೋ ಈಗ ವೈರಲ್ ಆಗಿದ್ದು ಘಟನೆ ಭೀಕರತೆಗೆ ಸಾಕ್ಷಿಯಾಗಿದೆ. ಬಸ್ ಬ್ರೇಕ್ ಫೇಲ್ ಆಗಿರಬಹುದು ಎಂದು ಶಂಕಿಸಲಾಗಿದೆ. ಜೋರಾಗಿ ಮಳೆಯೂ ಬರುತ್ತಿದ್ದರಿಂದ ನಿಯಂತ್ರಣಕ್ಕೆ ಸಿಕ್ಕಿರಲಿಲ್ಲ.