Publish Date: Sat, 13 Jan 2018 (09:12 IST)
Updated Date: Sat, 13 Jan 2018 (09:15 IST)
ಬೆಂಗಳೂರು: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಸನದ ಶಾಂತಿಗ್ರಾಮ ಬಳಿ ಭೀಕರ ಅಪಘಾತಕ್ಕೀಡಾಗಿದ್ದು ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 7 ರ ಬಳಿ ಬೆಳಗಿನ ಜಾವ 3 30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ 8 ಮಂದಿ ಸ್ಥಳದಲ್ಲೇ ಮೃತರಾಗಿದ್ದು 10 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.
ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದೆ. ಬಸ್ ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು. ಬಸ್ ನಲ್ಲಿದ್ದವರು ನಿದ್ರೆಯ ಮಂಪರಿನಲ್ಲಿದ್ದ ಕಾರಣ ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ