Select Your Language

Notifications

webdunia
webdunia
webdunia
webdunia

ಧಗಧಗನೆ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್: ಪ್ರಯಾಣಿಕರು ಪಾರು

ಧಗಧಗನೆ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್: ಪ್ರಯಾಣಿಕರು ಪಾರು
ಧರ್ಮಸ್ಥಳ , ಶನಿವಾರ, 1 ಏಪ್ರಿಲ್ 2017 (15:14 IST)
ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದ ಘಟನೆ ವರದಿಯಾಗಿದೆ.
 
ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿರುವಾಗ ಮಾರನಹಳ್ಳಿ ಬಳಿ ಘಟನೆ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
 
ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಬಸ್‌ನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರಿಗೆ ಕೆಳಗೆ ಇಳಿಯುವಂತೆ ಸೂಚನೆ ನೀಡಿದ್ದಾನೆ ಎನ್ನಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಕೆಳಗೆ ಇಳಿದೊಡನೆ ಬಸ್‌ನೊಳಗೆ ಮತ್ತಷ್ಟು ಬೆಂಕಿ ಕಾಣಿಸಿಕೊಂಡಿತು ಎಂದು ಮೂಲಗಳು ತಿಳಿಸಿವೆ.
 
ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ತಲುಪಿದ್ದು ಬೆಂಕಿಯನ್ನು ಆರಿಸುವ ಪ್ರಯತ್ನದಲ್ಲಿ ತೊಡಗಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜನಾರ್ದನ ರೆಡ್ಡಿ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ: ಎಸ್.ಆರ್.ಹಿರೇಮಠ್