Publish Date: Mon, 17 Oct 2022 (15:23 IST)
Updated Date: Mon, 17 Oct 2022 (15:26 IST)
ಬೆಂಗಳೂರಿನ ಸುಜಾತ ಥಿಯೇಟರ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಹೋಂಡಾ ಆಕ್ಟೀವಾದಲ್ಲಿ ಬರುತ್ತಿದ್ದ ಮಹಿಳೆ ಮೇಲೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಉಮಾ ಎಂಬ ಮಹಿಳೆ ಕೆಳಗೆ ಬಿದ್ದಿದ್ದು ಈ ವೇಳೆ ಹಿಂದೆ ಬರುತ್ತಿದ್ದ ಬಸ್ ಮಹಿಳೆಯ ಮೇಲೆ ಹರಿದಿದೆ. ಈ ವೇಳೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರ ಜೊತೆ ಇದ್ದ ಮಗಳು ವನಿತಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.