Daily Horoscope

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

Krishnaveni K
ಬುಧವಾರ, 18 ಫೆಬ್ರವರಿ 2026 (10:15 IST)
ಬೆಂಗಳೂರು: ನಾಳೆ ಕೆಎಸ್ಆರ್ ಟಿಸಿ ಬಸ್ ಗೆ ಕಾದರೆ ನಿಮಗೆ ತೊಂದರೆ ಗ್ಯಾರಂಟಿ. ಯಾಕೆಂದರೆ ನಾಳೆ ಸಾಕಷ್ಟು ಬಸ್ ರಸ್ತೆಗಿಳಿಯುವುದೇ ಅನುಮಾನ. ಇದಕ್ಕೆ ಇಲ್ಲಿದೆ ಕಾರಣ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ ಟಿಸಿ ನೌಕರರು ನಾಳೆ ಬೆಂಗಳೂರು  ಚಲೋ ಧರಣಿ ನಡೆಸಲಿದ್ದಾರೆ. ಈ ಧರಣಿಯಲ್ಲಿ ಸಾಕಷ್ಟು ಕೆಎಸ್ಆರ್ ಟಿಸಿ ನೌಕರರು ಭಾಗಿಯಾಗುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯದ ಬಹುತೇಕ ಕಡೆ ಕೆಎಸ್ಆರ್ ಟಿಸಿ ಬಸ್ ಸಂಚಾರಕ್ಕೆ ಸಮಸ್ಯೆಯಾಗಬಹುದು.

ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಎಚ್ಚರಿಕೆ ನೀಡಿದ್ದಾರೆ. ಕೆಎಸ್ಆರ್ ಟಿಸಿ ನೌಕರರು ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಪಾಲ್ಗೊಂಡರೆ ಇದ್ದರೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಕೆಎಸ್ಆರ್ ಟಿಸಿ ನೌಕರರ ಮುಷ್ಕರದಿಂದಾಗಿ ನಾಳೆ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವುದು ಖಚಿತವಾಗಿದೆ. ಹೀಗಾಗಿ ನಾಳೆ ಪ್ರಯಾಣ ಮಾಡಲು ಯೋಜನೆ ಹಾಕಿಕೊಂಡಿರುವವರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತವಾಗಿದೆ. ಜನವರಿ 29 ರಂದೇ ಈ ಮುಷ್ಕರ ನಡೆಯಬೇಕಿತ್ತು. ಆದರೆ ಆಗ ನೌಕರರ ಸಂಘದ ನಾಯಕ ಅನಂತ ಸುಬ್ಬರಾವ್ ನಿಧನ ಹಿನ್ನಲೆಯಲ್ಲಿ ಮುಷ್ಕರ ಮುಂದೂಡಿಕೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments