Select Your Language

Notifications

webdunia
webdunia
webdunia
webdunia

KSRTC, ಕಾರು ಡಿಕ್ಕಿ: ಯುವಕ ಸಾವು

KSRTC
ಸಕಲೇಶಪುರ , ಭಾನುವಾರ, 1 ಜನವರಿ 2023 (17:19 IST)
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಆಗಿರೋ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾರ್ಲೆ ಕೂಡಿಗೆ ಗ್ರಾಮದ ಬಳಿ ನಡೆದಿದೆ. ಬಾಗೆ ಸಮೀಪದ ಕಾಕನಮನೆ ಗ್ರಾಮದ ಯುವಕ ಅಭಿ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಹೊಸವರ್ಷ ಪಾರ್ಟಿ ಮುಗಿಸಿ ಅಭಿ ಎಂಬ ಯುವಕ ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಕಲೇಶಪುರದಿಂದ ಹಾನುಬಾಳು ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಆಗಿ ಈ ಅವಘಾಡ ಸಂಭವಿಸಿದೆ. ಸಕಲೇಶಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರ