Select Your Language

Notifications

webdunia
webdunia
webdunia
webdunia

ಜನರಿಗೆ ಬಸ್ ಟಿಕೆಟ್ ದರ ಏರಿಕೆ ಬರೆ ಹಾಕಿದ್ರೇನಂತೆ ನೌಕರರಿಗೆ ಸಿದ್ದರಾಮಯ್ಯ ಕೊಟ್ರು ಬಂಪರ್ ಗಿಫ್ಟ್

KSRTC Cashless Medical Scheme, Chief Minister Siddaramaiah, What is Cashless Medical Scheme, KSRTC

Sampriya

ಬೆಂಗಳೂರು , ಸೋಮವಾರ, 6 ಜನವರಿ 2025 (17:34 IST)
Photo Courtesy X
ಬೆಂಗಳೂರು:  ಕೆಎಸ್‌ಆರ್‌ಟಿಸಿ ನೌಕರರ 20 ವರ್ಷಗಳ ಬೇಡಿಕೆಯಾಗಿದ್ದ ನಗದು ರಹಿತಾ ಚಿಕಿತ್ಸಾ ಯೋಜನೆಗೆ ಕೆಎಸ್‌ಆರ್‌ಟಿಸಿ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. ಈ ಮೂಲಕ ಹಲವು ವರ್ಷಗಳ ಬೇಡಿಕೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಯೋಜನೆಯ ಪ್ರಯೋಜನಗಳು ಹೀಗಿದೆ: ಈ ಯೋಜನೆಯಡಿ ನೌಕರನ ಕುಟುಂಬದಲ್ಲಿ ತಂದೆ-ತಾಯಿ, ಹೆಂಡತಿ ಮಕ್ಕಳು ಎಲ್ಲರಿಗೂ ಚಿಕಿತ್ಸೆ ಸಿಗಲಿದೆ. ಯಾವುದೇ ಕಾಯಿಲೆ ಮತ್ತು ಎಷ್ಟೇ ಖರ್ಚಾದರೂ ಈ ಯೋಜನೆ ಅಡಿ ಚಿಕಿತ್ಸೆ ಸಿಗಲಿದೆ. ನೌಕರರು ಪ್ರತಿ ತಿಂಗಳು 650ರಂತೆ ವಾರ್ಷಿಕ 8 ಸಾವಿರ ರೂ. ಕಟ್ಟಬೇಕು. ಈ ಯೋಜನೆ ಅಡಿ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. 250 ಆಸ್ಪತ್ರೆಗಳು 24 ಡಯಾಗ್ನಸ್ಟಿಕ್ ಸೆಂಟರ್, 6 ಆಯುರ್ವೇದ ಆಸ್ಪತ್ರೆಗಳು ಈ ಯೋಜನೆ ಅಡಿ ಸರ್ಕಾರ ಎಮ್‌ಒಯು ಮಾಡಿಕೊಂಡಿದೆ.

ನಂತರ ಮಾತನಾಡಿದ ಅವರು, ಬಹಳ ದಿನದಿಂದ ಇದಕ್ಕೆ ಬೇಡಿಕೆ ಇತ್ತು. ನೌಕರರು ಮತ್ತು ಅವರ ಕುಟುಂಬಗಳಿಗೂ ಅನ್ವಯ ಆಗಲಿದೆ, ಉಪಯೋಗ ಆಗಲಿದೆ. ಎಲ್ಲಿ ಬೇಕಾದರೂ ಚಿಕಿತ್ಸೆ ಪಡೆಯಬಹುದು. ಕಾರ್ಡ್ ತೋರಿಸಿದರೆ ಚಿಕಿತ್ಸೆ ಕೊಡುತ್ತಾರೆ. ಏನೇ ಕಾಯಿಲೆ ಇದ್ದರೂ ಚಿಕಿತ್ಸೆ ಸಿಗಲಿದೆ ಎಂದು ಹೇಳಿದರು.

ಇದೇ ವೇಳೆ ನೊಂದಾಯಿತ ಆಸ್ಪತ್ರೆಗಳಿಗೆ ಸೂಚನೆ ನೀಡಿದ ಸಿಎಂ, ಯಾವುದೇ ಕಾರಣಕ್ಕೂ ತಿರಸ್ಕಾರದಿಂದ ನೌಕರರನ್ನು ನೋಡಬೇಡಿ. ಆಸ್ಪತ್ರೆಗಳಿಗೆ ನೌಕರರು ಬಂದ ಕೂಡಲೇ ಚಿಕಿತ್ಸೆ ಕೊಡಬೇಕು. ಹಣ ನೀಡಿ ಚಿಕಿತ್ಸೆ ಪಡೆಯುವವರ ಹಾಗೆಯೇ ನೌಕರರಿಗೂ ಚಿಕಿತ್ಸೆ ನೀಡಬೇಕೆಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಯಚೂರು ರಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು, ಕಾರಣ ಹೀಗಿದೆ