Webdunia - Bharat's app for daily news and videos

Install App

ಮೇಲಾಧಿಕಾರಿ ಕಿರುಕುಳ: ಕೆಎಸ್ಆರ್‌ಟಿಸಿ ಚಾಲಕ ಆತ್ಮಹತ್ಯೆ

Webdunia
ಮಂಗಳವಾರ, 24 ನವೆಂಬರ್ 2015 (09:49 IST)
ನಗರದಲ್ಲಿ ಕೆಎಸ್ಆರ್‌ಟಿಸಿ ಚಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಿರಿಯ ಅಧಿಕಾರಿಯ ಕಿರುಕುಳ ತಾಳಲಾರದೆ 27 ವರ್ಷದ ಚಾಲಕ ವಿನಾಯಕ್ ನೇಣುಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಹೆಬ್ಬಾಳದ ದಾಸರಹಳ್ಳಿಯಲ್ಲಿ ಸೋಮವಾರ ಮಧ್ಯಾಹ್ನ   ಈ ದುರ್ಘಟನೆ ನಡೆದಿದೆ.
 
ಕೆಜಿಎಫ್‍ನಲ್ಲಿ ಕೆಲಸ ಮಾಡುತ್ತಿದ್ದ ವಿನಾಯಕ್‌ಗೆ ಎರಡು ವರ್ಷದ ಹಿಂದೆ ಬೆಂಗಳೂರಿಗೆ ವರ್ಗಾವಣೆಯಾಗಿತ್ತು. ಶಾಂತಿನಗರದ ಕೆಎಸ್‍ಆರ್‍‌ಟಿಸಿ ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು ಹಿರಿಯ ಅಧಿಕಾರಿ ವಿಪರೀತ ಕಿರುಕುಳ ನೀಡುತ್ತಾರೆ ಎಂದು ಮನೆಯವರ ಬಳಿ ಹೇಳಿಕೊಂಡಿದ್ದರಂತೆ. ಇದೇ ಕಾರಣಕ್ಕಾಗಿ ಕಳೆದ ಹತ್ತು ದಿನದಿಂದ ಕೆಲಸಕ್ಕೆ ಸಹ ಹೋಗದೆ ಮನೆಯಲ್ಲಿಯೇ ಇದ್ದರೆಂದು ತಿಳಿದು ಬಂದಿದೆ. 
 
ನಿನ್ನೆ ಬೆಳಿಗ್ಗೆ ಇದ್ದ ಖಿನ್ನರಾಗಿದ್ದ ವಿನಾಯಕ್ ಅಧಿಕಾರಿಯ ಕಿರುಕುಳವೇ ತಮ್ಮ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
 
ವಿನಾಯಕ್ ಸಾವಿನಿಂದ ಅವರ ಕುಟುಂಬ ಕಂಗಾಲಾಗಿದೆ. ವಿವಾಹಿತರಾಗಿದ್ದ ವಿನಾಯಕ್ ಅವರಿಗೆ ಒಂದು ಮಗುವಿದ್ದು ಪತ್ನಿ ಮತ್ತೆ ಗರ್ಭಿಣಿಯಾಗಿದ್ದಾರೆ.
 
ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments