Daily Horoscope

ಮೇ 20 ರಿಂದ ಕೆಎಸ್‌ಆರ್‌ಟಿಸಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ

Webdunia
ಸೋಮವಾರ, 4 ಮೇ 2026 (18:14 IST)
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಮೇ 20 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದರ ಪರಿಣಾಮವಾಗಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಬಸ್ ಸೇವೆಗಳು ಅಂದು ಬೆಳಗ್ಗೆ 6 ಗಂಟೆಯಿಂದ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸಾರಿಗೆ ಸಂಘಟನೆಗಳ ಮುಖಂಡರು ಇತ್ತೀಚೆಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ನಿನ್ನೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟದ ಅಧ್ಯಕ್ಷೆ ಜ್ಯೋತಿ ಅನಂತಸುಬ್ಬ ರಾವ್ ಪ್ರತಿಭಟನೆಯನ್ನು ಘೋಷಿಸಿದರು. ಜನವರಿ 2024 ರಿಂದ ಜಾರಿಗೆ ಬರುವಂತೆ 25% ವೇತನ ಹೆಚ್ಚಳಕ್ಕೆ ಒಕ್ಕೂಟಗಳು ಒತ್ತಾಯಿಸಿವೆ ಎಂದು ಅವರು ಹೇಳಿದರು.

"ನಿಗದಿತ ಸಮಯದೊಳಗೆ ವೇತನ ಪರಿಷ್ಕರಣೆ ಜಾರಿಗೊಳಿಸಲು ನಾವು ಸಚಿವರಿಗೆ ಮನವಿ ಮಾಡಿದ್ದೇವೆ. ಆದರೆ, ಸರ್ಕಾರವು ಏಪ್ರಿಲ್ 1, 2025 ರಿಂದ 7% ಹೆಚ್ಚಳವನ್ನು ಮಾತ್ರ ನೀಡುತ್ತಿದೆ. ಇದು ಕಾರ್ಮಿಕರಿಗೆ ಸ್ವೀಕಾರಾರ್ಹವಲ್ಲ" ಎಂದು ಅನಂತಸುಬ್ಬ ರಾವ್ ಹೇಳಿದರು.

ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲತೆ ಉಂಟಾದರೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆಯಾಗಲಿದೆ ಎಂದು ಸಂಘದ ಮುಖಂಡರು ಎಚ್ಚರಿಸಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments