Webdunia - Bharat's app for daily news and videos

Install App

ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆ ಸಲ್ಲಿಕೆ

Webdunia
ಶನಿವಾರ, 4 ಜೂನ್ 2016 (18:41 IST)
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. 
 
ಡಿವೈಎಸ್‌ಪಿ ಅನುಪಮಾ ಶೆಣೈ ಅವರು ನಿನ್ನೆ ರಾತ್ರಿ ಕಾಂಗ್ರೆಸ್ ಮುಖಂಡ ರವಿ ಮತ್ತು ಬಿಜೆಪಿ ಪಂಚಾಯತಿ ಸದಸ್ಯ ರಜನಿಕಾಂತ್ ಮತ್ತು ಕೃಷ್ಣಮೂರ್ತಿಯವರನ್ನು ಬಂಧಿಸಿದ್ದು, ಈ ವೇಳೆ ಬಂಧಿತರ ಮೇಲೆ ಅನುಪಮಾ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. 
 
ಈ ಸಂಬಂಧ ಇಂದು ಡಿವೈಎಸ್‌ಪಿ ಕಛೇರಿ ಮುಂದೆ ಬಂಧಿತರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಇಲಾಖೆಯ ಕೆಲವು ಹಿರಿಯ ಅಧಿಕಾರಿಗಳು ಅನುಪಮಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರಿಂದ ಬೇಸರ ವ್ಯಕ್ತಪಡಿಸಿರುವ ಅನುಪಮಾ ಅವರು ತಮ್ಮ ಕಛೇರಿಯ ಸಿಬ್ಬಂದಿಯ ಬಳಿ ರಾಜೀನಾಮೆ ಪತ್ರ ನೀಡಿ ಹಿರಿಯ ಅಧಿಕಾರಿಗಳಿಗೆ ತಲುಪಿಸುವಂತೆ ಹೇಳಿ ಹೋಗಿದ್ದಾರೆ ಎನ್ನಲಾಗುತ್ತಿದೆ. 
 
ಈ ಹಿಂದೆ ರಾಜ್ಯ ಸಚಿವ ಪಿ.ಟಿ ಪರಮೇಶ್ವರ್ ನಾಯ್ಕ ಅವರ ಪ್ರಭಾವದಿಂದ ಅನುಪಮಾ ಶೆಣೈ ಅವರನ್ನು ದಿಢೀರ ವರ್ಗಾವಣೆ ಮಾಡಿದ್ದು ಚರ್ಚೆಗೆ ಗ್ರಾಸವಾಗಿತ್ತು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments