Publish Date: Mon, 28 Aug 2023 (19:02 IST)
Updated Date: Mon, 28 Aug 2023 (19:19 IST)
ಕುಮಾರ್ ಬಂಗಾರಪ್ಪ ಕಾಂಗ್ರೆಸ್ಗೆ ಹೋಗಲ್ಲ. ನಮ್ಮ ಪಕ್ಷದ ಯಾವುದೇ ಶಾಸಕರು, ಕಾರ್ಯಕರ್ತರು ಕಾಂಗ್ರೆಸ್ಗೆ ಹೋಗಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕುಮಾರ್ ಬಂಗಾರಪ್ಪ ನಮ್ಮ ನಾಯಕರಾಗಿದ್ದಾರೆ. ಅವರು ಶಾಸಕರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ನವರು ನಮ್ಮ ಪಕ್ಷಕ್ಕೆ ಬರುತ್ತಾರೆಂದು ಸುಳ್ಳು ಸುದ್ಧಿ ಹಬ್ಬಿಸುತ್ತಿದ್ದಾರೆ. ಅವರ ಆಮಿಷಗಳಿಗೆ ನಮ್ಮವರು ಯಾರೂ ಬಲಿಯಾಗಲ್ಲ. ಕಾಂಗ್ರೆಸ್ನವರ ಪೊಳ್ಳು ಆಮಿಷಗಳಿಗೆ ಯಾರು ಕೂಡ ಬಲಿಯಾಗಲ್ಲ. ಬರಗಾಲದಂತಹ ಸಂದರ್ಭದಲ್ಲಿ ಸರ್ಕಾರ ಸ್ಪಂದಿಸುವ ಕೆಲಸವಾಗುತ್ತಿಲ್ಲ. ಇಡೀ ಶಿವಮೊಗ್ಗ ಜಿಲ್ಲೆಯನ್ನು ಬರಗಾಲ ಪ್ರದೇಶ ಎಂದು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.