Select Your Language

Notifications

webdunia
webdunia
webdunia
webdunia

ಬಿಎಸ್‌ವೈ ಸಮ್ಮುಖದಲ್ಲಿ ಕುಮಾರ್ ಬಂಗಾರಪ್ಪ ಬಿಜೆಪಿಗೆ ಸೇರ್ಪಡೆ

ಬಿಎಸ್‌ವೈ ಸಮ್ಮುಖದಲ್ಲಿ ಕುಮಾರ್ ಬಂಗಾರಪ್ಪ ಬಿಜೆಪಿಗೆ ಸೇರ್ಪಡೆ
ಬೆಂಗಳೂರು , ಗುರುವಾರ, 9 ಮಾರ್ಚ್ 2017 (12:53 IST)
ಹಿರಿಯ ಕಾಂಗ್ರೆಸ್ ಮುಖಂಡ ಕುಮಾರ್ ಬಂಗಾರಪ್ಪ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
 
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಕುಮಾರ್ ಬಂಗಾರಪ್ಪ ಅವರನ್ನು ಯಡಿಯೂರಪ್ಪ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡಿದ್ದಾರೆ.
 
ಮತ್ತೊಬ್ಬ ಕಾಂಗ್ರೆಸ್ ಮುಖಂಡ ಜಿ.ಡಿ.ನಾಯ್ಕ ಕೂಡಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಇತರ ಪಕ್ಷಗಳ ಬಹುತೇಕ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ಮುಸುಕಿನ ಗುದ್ದಾಟ ಮುಂದುವರಿದಿದ್ದು, ಕಾರ್ಯಕ್ರಮಕ್ಕೆ ಈಶ್ವರಪ್ಪ ಗೈರುಹಾಜರಾಗಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಾರುಕಟ್ಟೆಗೆ ದಾಂಗುಡಿ ಇಟ್ಟ ಇಂಟೆಕ್ಸ್ ಎಸಿಗಳು