ಸಿದ್ದರಾಮಯ್ಯ ವಿರುದ್ಧ ಟ್ವೀಟರ್ ನಲ್ಲಿ ಕಿಡಿಕಾರಿದ ಕುಮಾರಸ್ವಾಮಿ

Webdunia
ಶುಕ್ರವಾರ, 25 ಅಕ್ಟೋಬರ್ 2019 (07:28 IST)
ಬೆಂಗಳೂರು : ಉಪಚುನಾವಣೆ ಕಾಂಗ್ರೆಸ್ 15 ಸೀಟು ಗೆದ್ದರೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದ ಸಿದ್ದರಾಮಯ್ಯ ನವರ ಹೇಳಿಕೆಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.



ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ? ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯ ಅವರನ್ನು ಬೇಡಿದ್ದು ಯಾರು? ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ ಕೊಟ್ಟವರು ಯಾರು?ಪ್ರಕೃತಿ ಚಿಕಿತ್ಸೆಯಲ್ಲಿ ಕೂತು ಕತ್ತಿ ಮಸಿದಿದ್ದು ಯಾರು?ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು ಎಂದು ಎಂದು ಪ್ರಶ್ನಿಸಿದ್ದಾರೆ.

 

ಹಾಗೇ ಮತ್ತೊಂದು ಟ್ವೀಟ್ ಮಾಡಿ, ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ ಯಾರು ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ನೀವು ಕೊಟ್ಟ ಸಹಕಾರಕ್ಕೆ ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ ನಾನು ಮರೆಯಲಾರೆ. ನಿಮ್ಮ ಸಹವಾಸ ನಮಗೂ ಬೇಡ ಎಂದು ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಮುಂದಿನ ಸುದ್ದಿ