Publish Date: Mon, 24 May 2021 (12:12 IST)
Updated Date: Mon, 24 May 2021 (12:18 IST)
ಬೆಂಗಳೂರು : ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಹಾಗೂ ಕೊರೊನಾದಿಂದ ಮೃತಪಟ್ಟ ಶಿಕ್ಷಕರಿಗೆ ಪರಿಹಾರ ನೀಡಬೇಕು ಎಂದು ಟ್ವೀಟ್ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೊನಾ ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಹಲವು ಶಿಕ್ಷಕರು ಬಲಿಯಾಗಿದ್ದಾರೆ. ಮೃತ ಶಿಕ್ಷಕರು ಉಪಚುನಾವಣೆಯಲ್ಲಿ ಕೆಲಸ ಮಾಡಿದ್ರು, ವಿದ್ಯಾಗಮದಲ್ಲಿ ಪಾಠ ಮಾಡಿದ ಶಿಕ್ಷಕರು ಕೂಡ ಸಾವನ್ನಪ್ಪಿದ್ದಾರೆ. ಮೃತ ಶಿಕ್ಷಕರಿಗೆ 50ಲಕ್ಷರೂ ಪರಿಹಾರ ನೀಡಬೇಕು ಎಂದು ಟ್ವೀಟ್ ಮೂಲಕ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.