ತಮ್ಮ ಹುಳುಕು ಮುಚ್ಚಿಕೊಳ್ಳಲು ಕುಮಾರಸ್ವಾಮಿ ದಿನಾ ಒಂದೊಂದು ಹೇಳಿಕೆ: ಡಿಕೆ ಸುರೇಶ್

Sampriya
ಬುಧವಾರ, 1 ಮೇ 2024 (18:48 IST)
Photo Courtesy X
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ಅವರ ಅಶ್ಲೀಲ ವಿಡಿಯೋ ಪ್ರಕರಣವು ಎಚ್‌ಡಿ ಕುಮಾಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ಚುನಾವಣೆಗೂ ಮುಂಚೆನೇ ತಿಳಿದಿತ್ತು. ಇದೀಗ ಪ್ರಕರಣದಿಂದ ನುಣುಚಿಕೊಳ್ಳಲು ಡಿಕೆಶಿ ಹಾಗೂ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೇಳಿದರು.

ಇಂದು ಮಾಧ್ಯಮದವರ ಜತೆ ಮಾತನಾಡಿದ ಅವರು, ಡಿಕೆಶಿ ಬಳಿ ಪೆನ್‌ಡ್ರೈವ ಇರುತ್ತಿದ್ದರೆ ಅವರು ಇನ್ನೂ ಮುಂಚಿತವಾಗಿಯೇ ಬಿಡುಗಡೆ ಮಾಡಬಹುದಿತ್ತಲ್ಲವೇ? ಪೆನ್‌ ಡ್ರೈವ್ ಹಾಸನ ಜಿಲ್ಲೆಯಲ್ಲಿ ಬಿಡುಗಡೆಯಾಗಿದ್ದು, ಅಲ್ಲಿಯ ನಾಯಕರ ಕೈವಾಡ ಅದರಲ್ಲಿದೆ. ಮೈತ್ರಿಕೂಟದ ನಾಯಕರು ಹಾಗೂ ಕುಮಾರಸ್ವಾಮಿ ಅವರ ಕೈವಾಡವಿದೆ ಎಂದು ಆರೋಪಿಸಿದರು.  

ಇನ್ನು ಈ ವಿಡಿಯೋಗಳು ನಾಲ್ಕು ವರ್ಷದ ಹಿಂದಿನದ್ದು ಎಂದು ಎಚ್ ಡಿ ರೇವಣ್ಣನವೇ ಹೇಳಿದ್ದು, ಬೇರೆಯವರ ಮೇಲೆ ಯಾಕೆ ಆರೋಪ ಮಾಡಬೇಕು ಎಂದು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ಐನೂರಕ್ಕಿಂತ ಹೆಚ್ಚು ಸಂತ್ರಸ್ತೆಯರಿಗೆ ರಕ್ಷಣೆ, ನ್ಯಾಯ ಒದಗಿಸುವುದು ಮುಖ್ಯವೋ, ಅಥವಾ ಕುಮಾರಸ್ವಾಮಿ ಅವರ ಆರೋಪ ಮುಖ್ಯವೋ. ತಮ್ಮ ಹುಳುಕು ಮುಚ್ಚಿಕೊಳ್ಳಲು ದಿನಾ ಒಂದೊಂದು ಹೇಳಿಕೆ ನೀಡುತ್ತಲೇ ಇರುತ್ತಾರೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments