Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು , ಸೋಮವಾರ, 2 ಅಕ್ಟೋಬರ್ 2017 (09:02 IST)
ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಡಿಸ್ಚಾರ್ಜ್ ಆದ ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಯ ಆವರಣದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೆ.ಪಿ. ನಗರದ ನಿವಾಸಕ್ಕೆ ತೆರಳಿದ್ದಾರೆ.

ಸೆ.21ರಂದು ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಸೆ.23ರಂದು ಟಿಶ್ಯೂ ವಾಲ್ವ್ ಬದಲಾವಣೆಯ ಶಸ್ತ್ರಚಿಕಿತ್ಸೆ ನಡೆದಿತ್ತು. 12 ದಿನಗಳ ಕಾಲ ಚಿಕಿತ್ಸೆ ಪಡೆದ ಕುಮಾರಸ್ವಾಮಿ ಸಂಪೂರ್ಣ ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ.

ನಿನ್ನೆ ಆಸ್ಪತ್ರೆಯಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಕುಮಾರಸ್ವಾಮಿ, ತಮ್ಮ ಆರೋಗ್ಯ ಸುಧಾರಣೆಗೆ  ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದರು. 25 ದಿನಗಳ ಕಾಲ ವಿಶ್ರಾಂತಿ ಅಗತ್ಯವಿರುವುದರಿಂದ ಯಾರೂ ತಮ್ಮ ಭೇಟಿಗೆ ಬರದಂತೆ ಮನವಿ ಮಾಡಿದರು. ನವೆಂಬರ್`ನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಕುಮಾರಸ್ವಾಮಿ ಘೋಷಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿಷ್ಣು ಎಸ್ಕೇಪ್ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್… ಭಾವ ರಾಜೇಶ್ ಅರೆಸ್ಟ್