Select Your Language

Notifications

webdunia
webdunia
webdunia
webdunia

ಈ ಜಿಲ್ಲೆಗೆ ಭರ್ಜರಿ ಗಿಫ್ಟ್ ನೀಡಿದ ಕುಮಾರಸ್ವಾಮಿ

ಈ ಜಿಲ್ಲೆಗೆ ಭರ್ಜರಿ ಗಿಫ್ಟ್ ನೀಡಿದ ಕುಮಾರಸ್ವಾಮಿ
ಕೋಲಾರ , ಶುಕ್ರವಾರ, 12 ಜುಲೈ 2019 (17:51 IST)
ಸಮ್ಮಿಶ್ರ ಸರ್ಕಾರ ಪತನದ ಅಂಚಿನಲ್ಲಿದ್ದರೂ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೋಲಾರ ಜಿಲ್ಲೆಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಎಂವಿಕೆ ಗೋಲ್ಡನ್ ಡೇರಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ. 50 ಕೋಟಿ ರೂಪಾಯಿ ಅನುದಾನದಲ್ಲಿ ಮೊದಲನೇ ಕಂತಾಗಿ 25 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವಂತೆ ಸಿಎಂ ಕುಮಾರಸ್ವಾಮಿ ಆರ್ಥಿಕ ಇಲಾಖೆಗೆ ಆದೇಶಿಸಿದ್ದಾರೆ.

ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸಿಎಂ ಕುಮಾರಸ್ವಾಮಿ ಹಣವನ್ನ ಕೂಡಲೇ ಬಿಡುಗಡೆ ಮಾಡುವಂತೆ ಪತ್ರವನ್ನ ಬರೆದಿದ್ದಾರೆ. ಪತ್ರದಲ್ಲಿ ಮಾಲೂರು ಶಾಸಕರೂ ಆಗಿರುವ ಕೋಮುಲ್ ಅಧ್ಯಕ್ಷ ಕೆ.ವೈ. ನಂಜೇಗೌಡ ಅವ್ರು ಎಂವಿಕೆ ಗೋಲ್ಡನ್ ಡೇರಿಗೆ 50 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವಂತೆ ಸಿಎಂಗೆ ಮನವಿ ಮಾಡಿರುವ ಪತ್ರದ ಬಗ್ಗೆ ಉಲ್ಲೇಖಿಸಲಾಗಿದೆ.

ಸಿಎಂ ಕುಮಾರಸ್ವಾಮಿ ವಿರುದ್ಧ ಅತೃಪ್ತ ವ್ಯಕ್ತಪಡಿಸಿ ಒಂದೆಡೆ ಶಾಸಕರು ರಾಜೀನಾಮೆ ನೀಡುತ್ತಿದ್ದರೆ, ಮತ್ತೊಂದೆಡೆ ಉಳಿದ ಶಾಸಕ ಮನವೊಲಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಅನ್ನೋದ್ದಿಕ್ಕೆ ಈ ಪ್ರಕರಣ ನಿದರ್ಶನವಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕನ ರಾಜೀನಾಮೆಯಿಂದ ಜೆಡಿಎಸ್ ಗೆ ಗ್ರಹಣ ಬಿಟ್ಹೋಯ್ತಂತೆ