Select Your Language

Notifications

webdunia
webdunia
webdunia
webdunia

ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ

ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ
ಬೆಂಗಳೂರು , ಸೋಮವಾರ, 25 ಸೆಪ್ಟಂಬರ್ 2017 (15:20 IST)
ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ದ್ರವಾಹಾರ ಸೇವನೆ ಮಾಡುತ್ತಿರುವ ಕುಮಾರಸ್ವಾಮಿಯವರು ಇವತ್ತು ಎದ್ದು ಸ್ವಲ್ಪ ದೂರ ನಡೆದಿದ್ದಾರೆ. ಪ್ರತೀ ಗಂಟೆಗೊಮ್ಮೆ ಡಾ. ಸತ್ಯಕಿ ನೇತೃತ್ವದ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬೆಳಗ್ಗೆಯೇ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದ ಮಾಜಿ ಪ್ರಧಾನಿ ದೇವೇಗೌಡರು ಮಗನ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.  ಇನ್ನೂ ಕೆಲವು ದಿನ ಐಸಿಯೂನಲ್ಲೇ ಮುಂದುವರೆಯುವಂತೆ ತಿಳಿಸಿರುವುದಾಗಿ ದೇವೇಗೌಡರು ಹೇಳಿದ್ದಾರೆ.

ಕುಮಾರಸ್ವಾಮಿಯವರಿಗೆ ವಿಶ್ರಾಂತಿ ಅಗತ್ಯವಿರುವುದರಿಂದ ಅವರ ಭೇಟಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರದಂತೆ ವೈದ್ಯರು ಮನವಿ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.

ಕಳೆದ ಶನಿವಾರ ಕುಮಾರಸ್ವಾಮಿಯವರಿಗೆ ಹೃದಯದ ಟಿಶ್ಯೂ ವಾಲ್ವ್ ಬದಲಿಸುವ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. 2007ರಲ್ಲಿ ಟಿಶ್ಯೂ ವಾಲ್ವ್ ಅಳವಡಿಸಲಾಗಿತ್ತು. ಇತ್ತೀಚೆಗೆ, ಕುಮಾರಸ್ವಾಮಿ ಇಸ್ರೇಲ್`ಗೆ ಭೇಟಿ ನೀಡಿದ ಸಂದರ್ಭ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ಶಸ್ತ್ರಚಿಕಿತ್ಸೆ ನಡೆಸಿ ಟಿಶ್ಯೂ ವಾಲ್ವ್ ಬದಲಿಸಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿವಾಹ ಪ್ರಸ್ತಾಪ ತಿರಸ್ಕರಿಸಿದ ಯುವತಿಯ ಸಜೀವ ದಹನ