ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ವ್ಯಂಗ್ಯ

sampriya
ಮಂಗಳವಾರ, 21 ಮೇ 2024 (19:25 IST)
Photo By X
ಬೆಂಗಳೂರು: “ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.

ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಡಿ.ಕೆ.ಶಿವಕುಮಾರ್ ರಾಜಿನಾಮೆ ನೀಡಲಿ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ಅವರು ತಿರುಗೇಟು ನೀಡಿದ್ದು ಹೀಗೆ

“ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಎಂದು ಅವರು ಆಸೆ ಪಡುವುದನ್ನು ನಾನು ತಪ್ಪು ಎಂದು ಹೇಳಲು ಆಗುತ್ತದೆಯೇ?” ಎಂದರು.

ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದಾಗ “ಮೊದಲು ಶಿಕ್ಷಕ, ಪದವೀದರ ಕ್ಷೇತ್ರದ ಚುನಾವಣೆ ಮುಗಿಯಲಿ ನಂತರ ಇದರ ಬಗ್ಗೆ ಕೆಲಸ ಪ್ರಾರಂಭ ಮಾಡುತ್ತೇವೆ” ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments