Publish Date: Fri, 18 May 2018 (10:14 IST)
Updated Date: Fri, 18 May 2018 (10:15 IST)
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಬಹುಮತವಿದ್ದರೂ ಮೈತ್ರಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಡದೇ ಬಹುದೊಡ್ಡ ಪಕ್ಷ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ಕೊಟ್ಟಿದ್ದಕ್ಕೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.
ರಾಜ್ಯಾದ್ಯಂತ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುವಂತೆ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಆದೇಶಿಸಿದ್ದಾರೆ. ರಾಜ್ಯಪಾಲರು ಬಿಜೆಪಿ ಏಜೆಂಟರಂತೆ ಕಾರ್ಯನಿರ್ವಹಿಸಿದರು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ನಡುವೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಎಚ್ಚರಿಕೆ ಹಿನ್ನಲೆಯಲ್ಲಿ ಯಡಿಯೂರಪ್ಪ ಮತ್ತು ಕೆಎಸ್ ಈಶ್ವರಪ್ಪ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.