ಮೈತ್ರಿಯಲ್ಲಿ ಬಿರುಕು?: ಕುಮಾರಸ್ವಾಮಿ ರಾಜೀನಾಮೆ ಕೊಟ್ಟು ತೊಲಗಲಿ ಎಂದ ಮಾಜಿ ಸಿಎಂ

Webdunia
ಶನಿವಾರ, 29 ಜೂನ್ 2019 (17:20 IST)
ಹದಿಮೂರೇ ತಿಂಗಳಲ್ಲಿ ರಾಜ್ಯದಲ್ಲಿ ಮತ್ತೆ ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಆಗದಿದ್ದರೆ ರಾಜೀನಾಮೆ ಕೊಟ್ಟು ತೊಲಗಲಿ. ಹೀಗಂತ ಮಾಜಿ ಸಿಎಂ ಹರಿಹಾಯ್ದಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇರಬೇಕಿತ್ತು.103 ಶಾಸಕರ ಬದಲಿಗೆ 115 ಶಾಸಕರು ಇದ್ದಿದ್ದರೆ ಕೇಂದ್ರದಲ್ಲಿ ಮೋದಿ ಸರ್ಕಾರ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇರುತ್ತಿತ್ತು. ಈ ಬಗ್ಗೆ ರಾಜ್ಯದ ಜನರಿಗೆ ಕೊರಗಿದೆ. ಓಟು ಬಿಜೆಪಿಗೆ ಕೆಲಸ ಮಾಡಿ ಅಂತ ನಮ್ಮನ್ನು ಕೇಳ್ತೀರಾ ಅಂತಾ ಸೊಕ್ಕಿನ, ಧಿಮಾಕಿನ ಮಾತು ಸಿಎಂ ಹೇಳಿದ್ದಾರೆ‌.

ಅವರಿಗೆ ಜನರು ಸರಿಯಾದ ಪಾಠ ಕಲಿಸುತ್ತಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಕುಡಿಯುವ ನೀರಿಗೆ ಹಾಹಾಕಾರ ಇದೆ. ಈ ಸಂದರ್ಭದಲ್ಲಿ ವಿದೇಶ ಪ್ರವಾಸ ಮಾಡುತ್ತೀರಾ? ಈ ಸಂದರ್ಭದಲ್ಲಿ ನೀವು ರಾಜ್ಯದ ಉದ್ದಗಲಕ್ಕೇ ಓಡಾಟ ಮಾಡಬೇಕಿತ್ತು ಅಂತ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಗರಂ ಆದರು.

ಕರ್ನಾಟಕದಲ್ಲಿ ದುರಹಂಕಾರ, ತುಘಲಕ್ ಸರ್ಕಾರ ನಡೆಯುತ್ತಿದೆ. ಯಾವ ಸಂದರ್ಭದಲ್ಲಿ ಬೇಕಾದರೂ ಈ ಸರ್ಕಾರ ಬೀಳಬಹುದು. ನಾವಾಗಿಯೇ ಯಾವುದೇ ಎಂಎಲ್ ಎ ಯನ್ನು ಕರೆಯಲ್ಲ‌. ಅವರಾಗಿಯೇ ರಾಜೀನಾಮೆ ಕೊಟ್ಟು ಬಂದರೆ ಅದಕ್ಕೆ ನಾವು ಜವಾಬ್ದಾರರಲ್ಲ. ಹದಿಮೂರೇ ತಿಂಗಳಲ್ಲಿ ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಆಡಳಿತ ನಡೆಸಲು ನಿಮಗೆ ಆಗದಿದ್ದರೆ ರಾಜೀನಾಮೆ ಕೊಟ್ಟು ತೊಲಗಿ ಎಂದು ಸಿಎಂಗೆ ಟಾಂಗ್ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments