Select Your Language

Notifications

webdunia
webdunia
webdunia
webdunia

ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ನಮ್ಮ ಹೆಸರು ಎಳೆದು ತರುವಂತಿಲ್ಲ: ತಡೆಯಾಜ್ಞೆ ತಂದ ಕುಮಾರಸ್ವಾಮಿ

HD Kumaraswamy

Krishnaveni K

ಬೆಂಗಳೂರು , ಸೋಮವಾರ, 6 ಮೇ 2024 (17:13 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ಮತ್ತು ತಂದೆ ಎಚ್ ಡಿ ದೇವೇಗೌಡರ ಹೆಸರು ಎಳೆದು ತರುವಂತಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.

ಸಹೋದರ ಎಚ್ ಡಿ ರೇವಣ್ಣ ಹಾಗೂ ಪುತ್ರ ಪ್ರಜ್ವಲ್ ಮೇಲೆ ಲೈಂಗಿಕ ಕಿರುಕುಳ ಆರೋಪ ಬಂದಿದೆ. ಈ ಪ್ರಕರಣದಲ್ಲಿ ಕುಮಾರಸ್ವಾಮಿ ಅವರ ಹೆಸರನ್ನು ಹೇಳಿ ಕೆಲವರು ಟೀಕೆ ಮಾಡುತ್ತಿದ್ದಾರೆ. ಹೀಗಾಗಿ ಇದರಿಂದ ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಬರುತ್ತಿದೆ. ನಮಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಕುಮಾರಸ್ವಾಮಿ ಹೇಳುತ್ತಲೇ ಬಂದಿದ್ದಾರೆ.

ಈ ಬಗ್ಗೆ ಮಾಧ‍್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿ ಪ್ರಸಾರ ಮಾಡುವಾಗ ನನ್ನ ಮತ್ತು ತಂದೆ ದೇವೇಗೌಡರ ಹೆಸರು ಬಳಸಿ ತೇಜೋವಧೆ ಮಾಡುವಂತಿಲ್ಲ ಎಂದು ಕುಮಾರಸ್ವಾಮಿ ಕೋರ್ಟ್ ಮೂಲಕ ತಡೆಯಾಜ್ಞೆ ತಂದಿದ್ದಾರೆ. ಬೆಂಗಳೂರಿನ 34 ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಈ ಸಂಬಂಧ ದೂರು ನೀಡಲಾಗಿತ್ತು.

ಕೆಲವರು ಅನಗತ್ಯವಾಗಿ ತಮ್ಮ ಹಾಗೂ ತಂದೆ ಎಚ್ ಡಿ ದೇವೇಗೌಡರ ಹೆಸರು ಬಳಕೆ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ತಮ್ಮ ಪಾಲೂ ಇದೆ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಈಗ ಕುಮಾರಸ್ವಾಮಿ ತಡೆಯಾಜ್ಞೆ ತಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೆಡಿಕಲ್ ಸೀಟು ಹಂಚಿಕೆ: ಖರ್ಗೆ ಅಳಿಯನ ವಿರುದ್ಧ 800 ಕೋಟಿ ರೂ. ಹಗರಣ ಆರೋಪ