Publish Date: Tue, 09 Jun 2020 (20:12 IST)
Updated Date: Tue, 09 Jun 2020 (20:13 IST)
ರಾಜ್ಯಸಭೆ ಚುನಾವಣೆ ಅಖಾಡ ರಂಗೇರುತ್ತಿದೆ. ಈ ನಡುವೆ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿಯಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯಸಭೆಗೆ ಹೆಚ್.ಡಿ.ದೇವೇಗೌಡರು ಆಯ್ಕೆಯಾಗಬೇಕು ಎನ್ನುವುದು ರಾಷ್ಟ್ರಮಟ್ಟದ ನಾಯಕರ ಬಯಕೆಯಾಗಿದೆ.
ಹೀಗಾಗಿ ಎಐಸಿಸಿ ನಾಯಕರು ಹಾಗೂ ಸೋನಿಯಾ ಗಾಂಧಿ ಅವರು ಹೆಚ್.ಡಿ.ಡಿ. ಅವರನ್ನು ರಾಜ್ಯಸಭೆಗೆ ಸ್ಪರ್ಧೆ ಮಾಡುವಂತೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದಿದ್ದಾರೆ.
ಕಾಂಗ್ರೆಸ್ ಬೆಂಬಲ ನೀಡಿದೆ. ಆದರೆ ಯಾವುದೇ ರಾಜಕೀಯ ಹೊಂದಾಣಿಕೆ ಅಥವಾ ಮೈತ್ರಿ ಮಾಡಿಕೊಂಡಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.