Publish Date: Tue, 21 Jan 2020 (19:05 IST)
Updated Date: Tue, 21 Jan 2020 (19:06 IST)
ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಕಿಡಿಕಾರಿದ್ದಾರೆ.
ಮಂಗಳೂರಲ್ಲಿ ಆತಂಕಕಾರಿ ಬೆಳವಣಿಗೆ ನಡೆಯುತ್ತಿದೆ. CAA ವಿರುದ್ಧದ ಹೋರಾಟ ಮಂಗಳೂರಲ್ಲಿ ತೀವ್ರಗೊಂಡಿದೆ. ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ.
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಯೋತ್ಪಾದನ ಕೃತ್ಯಗಳನ್ನು ಬೆಂಬಲಿಸಲಾಗುತ್ತಿದೆ. ಮೈತ್ರಿ ಸರ್ಕಾರ ಇದ್ದಾಗ ಸುವ್ಯವಸ್ಥೆ ಇತ್ತು. ಬಿಜೆಪಿ ಅಧಿಕಾರಕ್ಕೇರಿದ ನಂತರ ಹಿಂಸೆಗಳು ಆಗುತ್ತಿವೆ ಅಂತ ದೂರಿದ್ರು.
CAA ಕಾನೂನು ಜಾರಿ ಮಾಡಲು ಹೊರಟಾಗ ಅಶಾಂತಿ ವಾತಾವರಣ ಸೃಷ್ಟಿಯಾಗಿದೆ. ಮಂಗಳೂರು ಗಲಭೆ ಕುರಿತು ಗೊಂದಲ ಸೃಷ್ಟಿಸಲಾಗಿದೆ.
ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟ ಘಟನೆ ನಡೆದಿದೆ. ರಾಜ್ಯದಲ್ಲಿ ಆತಂಕ ಸೃಷ್ಟಿಸುವ ವಾತಾವರಣ ಇದೆ. ಆದಷ್ಟು ಬೇಗ ತನಿಖೆ ಮುಗಿಸಬೇಕು ಅಂತ ಮಂಗಳೂರಿನ ತೊಕ್ಕೊಟ್ಟಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.