Webdunia - Bharat's app for daily news and videos

Install App

ಕನ್ನಡ ನಮ್ಮ ಪಾಲಿನ ಮಾತೃ ಸ್ವರೂಪಿಣಿ : ಹಿಂದಿ ದಿವಸ್ ವಿರುದ್ಧ ಕುಮಾರಸ್ವಾಮಿ ಕಿಡಿ

Webdunia
ಮಂಗಳವಾರ, 14 ಸೆಪ್ಟಂಬರ್ 2021 (11:59 IST)
ಬೆಂಗಳೂರು(ಸೆ 14)  : ಇಂದು ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದೆ. ಆದ್ರೆ ಇದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿವೆ. ಇವರ ಜೊತೆ ಕೈಜೋಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ ಎಂದು ಟ್ವೀಟ್ ಮಾಡಿದ್ದಾರೆ.

ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ
ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ.
ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ? ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹಿಂದಿ ದಿವಸ್ ವಿರುದ್ಧ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments