Publish Date: Sat, 11 Nov 2017 (14:55 IST)
Updated Date: Sat, 11 Nov 2017 (14:58 IST)
ಸಿಎಂ ಸಿದ್ದರಾಮಯ್ಯ ಸಮಾಜವಾದಿ ಹಿನ್ನೆಲೆಯಿಂದ ಬಂದವರೆಂದು ಹೇಳ್ತಾರೆ. ಆದರೆ, 50 ಲಕ್ಷ ರೂ ಮೌಲ್ಯದ ಶೂ ಧರಿಸುತ್ತಾರೆ. ಇದು ಢೋಂಗಿ ಸಮಾಜವಾದ ಅಲ್ಲವೇ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸರಕಾರ ಚೆಕ್‌ಪೋಸ್ಟ್‌ಗಳಲ್ಲಿ ಖಾಸಗಿ ಗೂಂಡಾಗಳನ್ನು ನೇಮಿಸಿ ಹಣ ಲೂಟಿ ಹೊಡೆಯುತ್ತಿದೆ. ಪ್ರತಿನಿತ್ಯ 20 ರಿಂದ 30 ಲಕ್ಷ ಹಣ ಸಂಗ್ರಹಿಸಲಾಗುತ್ತಿದೆ. ಜಿಎಸ್‌ಟಿ ಜಾರಿ ಬಂದ ಮೇಲೆ ಚೆಕ್‌ಪೋಸ್ಟ್‌ಗಳನ್ನು ಮುಚ್ಚಬೇಕು ಎಂದು ಒತ್ತಾಯಿಸಿದರು.
ವಿಪಕ್ಷಗಳನ್ನು ಟೀಕಿಸಲು ಸಿಎಂ ಸಿದ್ದರಾಮಯ್ಯ ಪದೇ ಪದೇ ಢೋಂಗಿ ಪದ ಬಳಸುತ್ತಾರೆ. ಢೋಂಗಿ ಪದ ಸಿಎಂಗೆ ತುಂಬಾ ಪ್ರಿಯವಾಗಿದೆ. ಆದರೆ, ನಿಮ್ಮದು ಢೋಂಗಿ ಸಮಾಜವಾದವಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ರೌಡಿಗಳನ್ನು ಬಿಟ್ಟು ಸರಕಾರ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ. ಮುಂಬರುವ ಚುನಾವಣೆಗೆ ಹಣ ಸಂಗ್ರಹ ಮಾಡಲು ಸರಕಾರ ಮುಂದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.