ಅನಾರೋಗ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗಾಗಿ ಜೆಡಿಎಸ್ ರಾಜ್ಯಧ್ಯಕ್ಷ ಕುಮಾರಸ್ವಾಮಿ 26 ಲಕ್ಷ ರೂಪಾಯಿ ಸಹಾಯ ಧನ ನೀಡಿ ಮಾನವೀಯತೆ ಮೆರೆದಿದ್ದಾರೆ.
ಬಳಾರಿ ಜಿಲ್ಲೆಯ ಪರುಶುರಾಮ್ ಮತ್ತು ರೂಪಲೇಖಾ ದಂಪತಿಯ ಪುತ್ರ ಯಶವಂತ ಬೊನ್ ನ್ಯಾರೋ ಟ್ರಾನ್ಸಪ್ಲಾಂಟೇಶನ್ ಕಾಯಿಲೆಯಿಂದ ಬಳಲುತ್ತಿದ್ದ. ಬಡತನದಲ್ಲಿರುವ ದಂಪತಿ ಮಗನ ಚಿಕಿತ್ಸೆಗಾಗಿ ಪರದಾಡುತ್ತಿದ್ದು, ಈ ಕುರಿತು ಖಾಸಗಿ ಸುದ್ದಿ ವಾಹಿನಿ ಸಹಾಯ ಹಸ್ತ ಚಾಚುವಂತೆ ವರದಿಯನ್ನು ಪ್ರಸಾರ ಮಾಡಿತ್ತು. ಸುದ್ದಿ ವಾಹಿನಿಯ ವರದಿಗೆ ಎಚ್ಚತ್ತಿರುವ ಎಚ್.ಡಿ.ಕುಮಾರಸ್ವಾಮಿ ಬಾಲಕನ ಚಿಕಿತ್ಸೆಗಾಗಿ 26 ಲಕ್ಷ ರೂಪಾಯಿ ಸಹಾಯ ಧನ ನೀಡವುದಾಗಿ ಭರವಸೆ ನೀಡಿದ್ದಾರೆ.
ಬೊನ್ ನ್ಯಾರೋ ಟ್ರಾನ್ಸಪ್ಲಾಂಟೇಶನ್ ಕಾಯಿಲೆಯಿಂದ ಬಳಲುತ್ತಿರುವ ಯಶವಂತನಿಗೆ ನಾಳೆ ನಾರಾಯಣ ಹೃದಯಾಲಯದಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ.
ರಾಜ್ಯ ಸರಕಾರ ಬಿಪಿಎಲ್ ಯೋಜನೆ ಅಡಿಯಲ್ಲಿ ಉಚಿತ ಶಸ್ತ್ರ ಚಿಕಿತ್ಸೆ ಬರಿಸುವ ಯೋಜನೆಯನ್ನು ಜಾರಿಗೆ ತರಲಿ ಎಂದು ಆಗ್ರಹಿಸಿರುವ ಜೆಡಿಎಸ್ ರಾಜ್ಯಧ್ಯಕ್ಷ ಕುಮಾರಸ್ವಾಮಿ, ಬಡವರಿಗೆ ಸಹಾಯ ಮಾಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.