Select Your Language

Notifications

webdunia
webdunia
webdunia
webdunia

ಅಭ್ಯರ್ಥಿಗಳ ಪರವಾಗಿ ಕುಮಾರಸ್ವಾಮಿ ಭರ್ಜರಿ ಪ್ರಚಾರ

ಅಭ್ಯರ್ಥಿಗಳ ಪರವಾಗಿ ಕುಮಾರಸ್ವಾಮಿ ಭರ್ಜರಿ ಪ್ರಚಾರ
ಕಲಬುರ್ಗಿ , ಗುರುವಾರ, 3 ಮೇ 2018 (14:41 IST)
ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದೆ. ಪ್ರತಿಯೊಂದು ಪಕ್ಷದ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಮತಭೇಟೆಗೆ ಇಳಿದಿದ್ದಾರೆ. 
ಕಲಬುರ್ಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಯಡ್ರಾಮಿ ಗ್ರಾಮದಲ್ಲಿ ನಡೆದ ಜೇವರ್ಗಿ ಕ್ಷೇತ್ರದಲ್ಲಿ ವಿಧಾನಸಭೆ ಅಭ್ಯರ್ಥಿ ಕೇದಾರಲಿಂಗಯ್ಯ ಪರವಾಗಿ ಕುಮಾರಸ್ವಾಮಿ ಮತಯಾಚನೆ ಮಾಡಿದ್ರು. 
 
ನಂತರ ಮಾತನಾಡಿದ ಮಾಜಿ ಸಿಎಂ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ರು. ಕೇಂದ್ರ ಮತ್ತು ರಾಜ್ಯ ಸರಕಾರ ಎರಡೂ ಕೂಡ ರೈತರಿಗೆ ಮೋಸ ಮಾಡಿವೆ. ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡ್ತಿಲ್ಲ ಆದರೆ ಕಾರ್ಪೋರೇಟ್ ವಲಯದವರ ಸಾಲ ಮನ್ನಾ ಮಾಡುತ್ತಿದೆ. ರಾಜ್ಯದಲ್ಲಿ ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ಆದರೆ, ಅದು ಇನ್ನೂ ಮನ್ನಾ ಆಗಿಲ್ಲ
 
ರೈತರಿಗೆ ಸಾಲ ಮನ್ನಾದ ಹಣ ತಲುಪಿಲ್ಲ. ಇದು ದುರಾದೃಷ್ಟ ಎಂದ್ರು.ಜೆಡಿಎಸ್ ಪಕ್ಷಕ್ಕೆ ಮತ್ತೊಮ್ಮೆ ಅಧಿಕಾರಕ್ಕೆ ಬಂದ್ರೆ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡಲಾಗುವದು ಎಂದು ಕುಮಾರಸ್ವಾಮಿ ಭರವಸೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ತ ಪ್ರಧಾನಿ ಮೋದಿ, ಇತ್ತ ರಾಹುಲ್ ಗಾಂಧಿ ಬೀದರ್ ಗೆ