Select Your Language

Notifications

webdunia
webdunia
webdunia
webdunia

ದಲಿತ ಮಹಿಳೆ ಮುಂದಿಟ್ಟುಕೊಂಡು ಕುಮಾರಸ್ವಾಮಿ ರಾಜಕೀಯ: ಸಿದ್ದರಾಮಯ್ಯ

ದಲಿತ ಮಹಿಳೆ ಮುಂದಿಟ್ಟುಕೊಂಡು ಕುಮಾರಸ್ವಾಮಿ ರಾಜಕೀಯ: ಸಿದ್ದರಾಮಯ್ಯ
ಬೆಂಗಳೂರು , ಮಂಗಳವಾರ, 24 ಮೇ 2016 (16:11 IST)
ಸಿಎಂ ಜನತಾದರ್ಶನದಲ್ಲಿ ದಲಿತ ಮಹಿಳೆಗೆ ಕಿರುಕುಳ ಪ್ರಕರಣ ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ದಲಿತ ಮಹಿಳೆ ವಿಷಯವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
 
ಬೆಂಗಳೂರು ನಗರ ಪ್ರದಕ್ಷಿಣೆ ಕಾರ್ಯಕ್ರಮ ಮುಗಿಸಿ ತಮ್ಮ ಗೃಹ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತ ಮಹಿಳೆ ಸವಿತಾ ಮೇ 17 ರಂದು ಗೃಹ ಕಛೇರಿಯ ಮುಂದೆ ಗಲಾಟೆ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ ಮಹಿಳಾ ನಿಲಯಕ್ಕೆ ಕರೆದೊಯ್ದು ಬಿಡುಗಡೆ ಮಾಡಲಾಗಿದೆ. ಆದರೆ, ಈ ವಿಷಯವನ್ನು ಮುಂದಿಟ್ಟುಕೊಂಡು ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ದಲಿತ ಮಹಿಳೆ ಸವಿತಾ ಅವರನ್ನು ವಿಧಾನಸೌಧಕ್ಕೆ ಕರೆತಂದು ಸುದ್ದಿಗೋಷ್ಠಿ ನಡೆಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
 
ಈ ಕುರಿತು ಆಯುಕ್ತರಿಂದ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ದಲಿತ ಮಹಿಳೆ ಸವಿತಾ ಅವರನ್ನು ಕರೆಸಿ ಸಮಸ್ಯೆ ಕುರಿತು ಚರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಮಗಾರಿ ವಿಳಂಬ: ಸಿಎಂ ಸಿದ್ದರಾಮಯ್ಯರಿಂದ ಮುಖ್ಯ ಇಂಜನಿಯರ್‌ ಸಸ್ಪೆಂಡ್