Select Your Language

Notifications

webdunia
webdunia
webdunia
webdunia

ಜಗದೀಶ್ ಶೆಟ್ಟರ್ ವಿರುದ್ಧ ಕುಮಾರಸ್ವಾಮಿ ಕಣಕ್ಕಿಳಿಯಲಿ: ಹೊರಟ್ಟಿ

ಜಗದೀಶ್ ಶೆಟ್ಟರ್
ಬೆಳಗಾವಿ , ಶನಿವಾರ, 22 ಅಕ್ಟೋಬರ್ 2016 (17:50 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯಬೇಕು ಎಂದು ಜೆಡಿಎಸ್ ಎಂಎಲ್‌ಸಿ ಬಸವರಾಜ್ ಹೊರಟ್ಟಿ ಒತ್ತಾಯಿಸಿದ್ದಾರೆ.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಕಣಕ್ಕಿಳಿದರೇ ಸಾಕು, ಎಚ್‌ಡಿಕೆ ಪ್ರಚಾರಕ್ಕೆ ಬರುವುದೇ ಬೇಡ, ನಾನೇ ಅವರನ್ನು ಗೆಲ್ಲಿಸುತ್ತೇನೆ ಎಂದು ಹೇಳಿದರು.
 
ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಕೊಡುಗೆ ಶೂನ್ಯ. ಈ ಕುರಿತು ಬಹಿರಂಗವಾಗಿ ಚರ್ಚೆ ನಡೆಸಲು ನಾನು ಸಿದ್ಧ ಎಂದು ಸವಾಲ್ ಎಸೆದರು.  
 
ಮಹದಾಯಿ ನದಿ ನೀರು ಹಂಚಿಕೆ ವಿವಾದದಲ್ಲಿ ಗೋವಾ ಸರಕಾರ ಕ್ಯಾತೆ ತೆಗೆಯುತ್ತಿದೆ. ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ವಿವಾದವನ್ನು ಇತ್ಯರ್ಥಗೊಳಿಸಬೇಕು ಎಂದು ಜೆಡಿಎಸ್ ಎಂಎಲ್‌ಸಿ ಬಸವರಾಜ್ ಹೊರಟ್ಟಿ ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀನಿವಾಸ್ ಪ್ರಸಾದ್‌ಗೆ ಟಾಂಗ್ ನೀಡಿದ ಕಾಂಗ್ರೆಸ್!