Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ಹೇಳಿಕೆಯನ್ನು ಕಸದ ಬುಟ್ಟಿಗೆ ಹಾಕಬೇಕು: ದಿನೇಶ್ ಗುಂಡೂರಾವ್

ಕುಮಾರಸ್ವಾಮಿ ಹೇಳಿಕೆಯನ್ನು ಕಸದ ಬುಟ್ಟಿಗೆ ಹಾಕಬೇಕು: ದಿನೇಶ್ ಗುಂಡೂರಾವ್
ಬೆಂಗಳೂರು , ಶುಕ್ರವಾರ, 15 ಜುಲೈ 2016 (19:25 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಮಹತ್ವ ಕೊಡಬೇಕಿಲ್ಲ. ಅವರ ಹೇಳಿಕೆಯನ್ನು ಕಸದ ಬುಟ್ಟಿಗೆ ಹಾಕಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗೂಂಡರಾವ್, ಶಾಸಕರಿಂದ ಮತ್ತು ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಿದ್ದು ಎಚ್‌.ಡಿ.ಕುಮಾರಸ್ವಾಮಿ. ಅವರ ಹೇಳಿಕೆಗೆ ಮಹತ್ವ ಕೊಡಬೇಕಿಲ್ಲ. ಅವರು ನೀಡುವ ಹೇಳಿಕೆಯನ್ನು ಕಸದ ಬುಟ್ಟಿಗೆ ಹಾಕಬೇಕು ಎಂದು ಹೇಳಿದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿದೆ. ಇವರು ಕೇವಲ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತು ಮಾತನಾಡುತ್ತಿದ್ದಾರೆ. ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಪ್ರಕರಣ ಕುರಿತು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
 
ಹಾಸನದಲ್ಲಿ ಒಬ್ಬ ವ್ಯಕ್ತಿ ಜೆಡಿಎಸ್ ನಾಯಕ ಎಚ್‌.ಡಿ. ರೇವಣ್ಣ ಹೆಸರು ಪ್ರಸ್ತಾಪ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ. ಆ ಸಮಯದಲ್ಲಿ ಕುಮಾರ ಸ್ವಾಮಿ ಏಕೆ ಮಾತನಾಡಲಿಲ್ಲ. ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಯಾರ ಕೈವಾಡವಿದೆ ಎಂದು ಗೊತ್ತಾಗುತ್ತದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪುಣೆಯ ಚಿನ್ನದ ಶರ್ಟಿನ ವ್ಯಕ್ತಿ ದತ್ತಾತ್ರೇಯ ಫುಗೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ