Publish Date: Wed, 01 Mar 2017 (20:19 IST)
Updated Date: Wed, 01 Mar 2017 (20:22 IST)
ರಾಜ್ಯದಲ್ಲಿ ಜನತೆ ಸಾವಿರಾರು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಕ್ಯಾರೆ ಎನ್ನದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ಕಪ್ಪ ವಿಚಾರವನ್ನೇ ಪ್ರಮುಖವಾಗಿಸಿಕೊಂಡು ಆರೋಪ, ಪ್ರತ್ಯಾರೋಪದಲ್ಲಿ ಮುಳುಗಿ ಜನದ್ರೋಹಿಯಾಗಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಕಾಲೆಳೆಯುವುದರಲ್ಲಿಯೇ ಬಿಜಿಯಾಗಿವೆ. ಜನರ ಹಿತ ಕಾಯುವಂತಹ ಒಂದೇ ಒಂದು ಕಾರ್ಯಕ್ಕೆ ಮುಂದಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಜನರು ಗುಳೆ ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ. ರೈತರು ಕಂಗಾಲಾಗಿದ್ದಾರೆ. ರೈತರ ಸಾಲ ಮನ್ನಾ ಮಾಡುವ ಯೋಗ್ಯತೆ ಇರದವರು ಯಾಕೆ ಸರಕಾರ ನಡೆಸಬೇಕು ಎಂದು ಪ್ರಶ್ನಿಸಿದರು.
ರಾಜ್ಯದ ಜನತೆ ಇಂತಹ ಪಕ್ಷಗಳಿಗೆ ಮತ ನೀಡಿ ಮತವನ್ನು ಹಾಳು ಮಾಡುವುದು ಬೇಡ. ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ನೆರೆಯ ರಾಜ್ಯಗಳು ಇದನ್ನು ಸಾಬೀತುಪಡಿಸಿವೆ ಎಂದರು.
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ ಕೇವಲ 24 ಗಂಟೆಗಳಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿದೆ. ರೈತರಿಗಾಗಿ ಹಲವು ಯೋಜನೆಗಳನ್ನು ಸರಕಾರ ರೂಪಿಸಲಿದೆ ಎಂದು ಜೆಡಿಎಸ್ ರಾಜ್ಯಾದ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.