Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು , ಸೋಮವಾರ, 18 ಜುಲೈ 2016 (14:48 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಲವು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಇವರ ವಿರುದ್ಧ ಬಸ್‌ಗೆ ಕಲ್ಲು ತೂರಿದ ಹಾಗೂ ದೊಂಬಿ ಪ್ರಕರಣಗಳು ದಾಖಲಾಗಿವೆ. ಸಿಎಂ ಸಿದ್ದರಾಮಯ್ಯ ಆರೋಪಿ ನಂಬರ್ ಒನ್ ಹಾಗೂ ಸಿಎಂ ಆಪ್ತ ಮರಿಗೌಡ ಆರೋಪಿ ನಂಬರ್ 2 ಆಗಿದ್ದಾರೆ. ಆದರೂ ಸಹ ಇವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಆಪ್ತ ಮರಿಗೌಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಆದರೂ ಇವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಮುಖ್ಯಮಂತ್ರಿಯವರು ಹಿಟ್ & ರನ್ ಮಾಡುತ್ತಿದ್ದಾರೆ ಎಂದು ಹೇಳಿದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಣವ್ ಮೊಹಾಂತಿ ಅವರು ಇಂತಹ ಕೆಲಸ ಮಾಡಿರುತ್ತಾರೆ. ಆದರೂ ಸಹ ರಾಜ್ಯ ಸರಕಾರ ಅವರನ್ನು ಸಮರ್ಥಿಸಿಕೊಳ್ಳುತ್ತಿದೆ. ದೆಹಲಿಯಿಂದ ಓಡಿಸಾ ಮೂಲದ ದೇವದತ್ತ ಎಂಬುವವರು ನನಗೆ ಕರೆ ಮಾಡಿದ್ದರು. ಪ್ರಣವ್ ಮೊಹಾಂತಿ ಓಡಿಸಾ ರಾಜ್ಯದಲ್ಲಿ ಹುಟ್ಟಿದಕ್ಕೆ ನಾಚಿಕೆಯಾಗುತ್ತಿದೆ ಎಂದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತು ರಾಜ್ಯಪಾಲರ ಭೇಟಿ ಮಾಡುವ ಕುರಿತು ಚಿಂತಿಸಲಾಗುತ್ತಿದೆ ಎಂದು ಹೇಳಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನವನ್ನು ಮುಂದೂಡಲು ಸೂಚನೆ ನೀಡಿದರೆ ನಮಗೆ ಹೋರಾಟ ಮಾಡಲು ಬೇರೆ ದಾರಿಗಳಿವೆ. ಇಂತಹ ಸಮಯದಲ್ಲಿ ಚರ್ಚೆ ಮಾಡುವುದು ವೆಸ್ಟ್ ಅನಿಸುತ್ತಿದೆ ಎಂದು ಹೇಳಿದರು.
 
ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರತಿಪಕ್ಷ ನಾಯಕರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಸಮೇತ ಯಾವುದೇ ಹೋರಾಟ ಮಾಡಿಲ್ಲ. ಆ ಸಮಯದಲ್ಲಿ ಆಡಳಿತ ಸರಕಾರದ ವಿರುದ್ಧ ಹೋರಾಟ ಮಾಡಿದ್ದು ನಾನು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಪಕ್ಷಗಳ ವರ್ತನೆಗೆ ಸಿಎಂ ಸಿದ್ದರಾಮಯ್ಯ ಬೇಸರ