Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎನ್ನುವ ಅನುಮಾನ ಕಾಡುತ್ತಿದೆ: ಕುಮಾರಸ್ವಾಮಿ

ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎನ್ನುವ ಅನುಮಾನ ಕಾಡುತ್ತಿದೆ: ಕುಮಾರಸ್ವಾಮಿ
ಕೊಡಗು , ಶನಿವಾರ, 11 ಫೆಬ್ರವರಿ 2017 (14:43 IST)
ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎನ್ನುವ ಅನುಮಾನ ಜನರನ್ನು ಕಾಡುತ್ತಿದೆ. ಸರಕಾರ ಸಂಪೂರ್ಣವಾಗಿ ನಿಷ್ಟ್ರೀಯವಾಗಿದೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಕೊಡಗು ಜಿಲ್ಲೆಯ ವಿರಾಜಪೇಟ್ ತಾಲೂಕಿನ ಕೋತೂರು ಗ್ರಾಮದಲ್ಲಿ ಮಾತನಾಡಿದ ಅವರು, ಸರಕಾರ ಭ್ರಷ್ಟಾಚಾರಿಗಳಿಗೆ ಮಣೆಹಾಕುತ್ತಿದೆ. ಕಾಂಗ್ರೆಸ್ ಸರಕಾರ ಜನಸಾಮಾನ್ಯರ ಮತ್ತು ರೈತ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಯಡಿಯೂರಪ್ಪ ಮಾಡಿದ ಆರೋಪ ನಿಜವಾಗಿದ್ದರೆ ಸರಕಾರ ಒಂದು ಕ್ಷಣವು ಅಧಿಕಾರದಲ್ಲಿರಬಾರದು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. 
 
ಯಡಿಯೂರಪ್ಪ ಆರೋಪ ಇದೊಂದು ಸೂಕ್ಷ್ಮ ವಿಚಾರವಾಗಿದ್ದರಿಂದ ಹಾರಿಕೆಯ ಉತ್ತರ ಬೇಡ. ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪಿಸ್ತೂಲು ಹಿಡಿದು ಮತಗಟ್ಟೆಗೆ; ಬಿಜೆಪಿ ಶಾಸಕನ ಸಹೋದರನ ಬಂಧನ