Webdunia - Bharat's app for daily news and videos

Install App

ಸಿದ್ದರಾಮಯ್ಯರಿಂದ ಸದನದಲ್ಲಿ ಉಡಾಫೆ ಉತ್ತರ: ಕುಮಾರಸ್ವಾಮಿ ಆಕ್ರೋಶ

Webdunia
ಬುಧವಾರ, 13 ಜುಲೈ 2016 (18:56 IST)
ರಾಜ್ಯದಲ್ಲಿ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಉಡಾಫೆ ಉತ್ತರ ನೀಡಿದ್ದಾರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಂಗ ತನಿಖೆಗೆ ನೀಡುವ ಮೂಲಕ ರಾಜ್ಯ ಸರಕಾರ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ. ರಾಜ್ಯದಲ್ಲಿ ದಕ್ಷ ಮತ್ತು ಪ್ರಮಾಣಿಕ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ಹೇಳಿದರು.
 
ಸದನದಲ್ಲಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ಸುದಿರ್ಘ ಚರ್ಚೆ ನಡೆದಿದ್ದು, ಕಳೆದ ಎರಡು ದಿನಗಳಿಂದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದೇವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಳಿಕೆ ಖಂಡಿಸಿ ಸದನದ ಒಳಗೆ ಮತ್ತು ಹೊರಗೆ ಧರಣಿ ನಡೆಸುತ್ತೇವೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

India, Pakistan: ಉದ್ವಿಗ್ನತೆ ಮಧ್ಯೆಯೂ ಪಾಕ್‌ ವಶದಲ್ಲಿದ್ದ ಬಿಎಸ್‌ಎಫ್‌ ಯೋಧ ಭಾರತಕ್ಕೆ, ಕೇಂದ್ರದ ನಡೆಗೆ ಮೆಚ್ಚುಗೆ

ಟೆನ್ಷನ್‌ನಲ್ಲಿದ್ದ ಗುತ್ತಿಗೆದಾರರಿಗೆ ಗುಡ್‌ನ್ಯೂಸ್ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments