Webdunia - Bharat's app for daily news and videos

Install App

ಕುಂದಾನಗರಿ ಶಾಸಕರಿಗೆ ಸಿಗುತ್ತಾ ಮಂತ್ರಿಗಿರಿ?

Webdunia
ಸೋಮವಾರ, 15 ಮೇ 2023 (18:34 IST)
ರಾಜ್ಯದಲ್ಲಿ‌ ಕಾಂಗ್ರೆಸ್ ಸರ್ಕಾರ ರಚನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಶಾಸಕರಲ್ಲಿ ಸಚಿವ ಸ್ಥಾನಕ್ಕೆ‌ ಲಾಬಿ ಶುರುವಾಗಿದೆ. ಬೆಳಗಾವಿಯಲ್ಲಿ‌ 11 ಕಾಂಗ್ರೆಸ್ ‌ಶಾಸಕರು ಆಯ್ಕೆಯಾಗಿದ್ದು, ಸರ್ಕಾರ ರಚನೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ 11ರ ಪೈಕಿ 5 ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಶಾಸಕರಾದ ಗಣೇಶ ಹುಕ್ಕೇರಿ, ಲಕ್ಷ್ಮಣ ಸವದಿ, ಸತೀಶ್​​​ ಜಾರಕಿಹೊಳಿ,‌ ಲಕ್ಷ್ಮಿ ಹೆಬ್ಬಾಳ್ಕರ್​​​​​,‌ ಮಹಾಂತೇಶ ಕೌಜಲಗಿ ನಡುವೆ ಮಂತ್ರಿಗಿರಿಗಾಗಿ ಲಾಬಿ ಶುರುವಾಗಿದೆ. ಹ್ಯಾಟ್ರಿಕ್ ಗೆಲುವು ಪಡೆದ ಪುತ್ರ ಗಣೇಶ ಹುಕ್ಕೇರಿಗೆ ಸಚಿವ ಸ್ಥಾನ ನೀಡಬೇಕೆಂದು ಪ್ರಕಾಶ್​​ ಹುಕ್ಕೇರಿ
ಬೇಡಿಕೆ ಇಟ್ಟಿದ್ದಾರಂತೆ. ಬಿಜೆಪಿ ತೊರೆದು ಬಂದ ಲಕ್ಷ್ಮಣ ಸವದಿ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.. ಮಹಿಳಾ ಕೋಟಾದಡಿ ಲಕ್ಷ್ಮಿ ಹೆಬ್ಬಾಳ್ಕರ್​​ಗೂ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಮಾಜಿ ಸಚಿವ ರಮೇಶ್​​​​​​ ಜಾರಕಿಹೊಳಿ ವಿರೋಧ ಕಟ್ಟಿಕೊಂಡು ಗೆದ್ದಿರುವ ಲಕ್ಷ್ಮಿ ಹೆಬ್ಬಾಳ್ಕರ್​​​ಗೆ ಈ ಬಾರಿ ಸಚಿವ ಸ್ಥಾನ ಪಕ್ಕಾ ಎನ್ನಲಾಗ್ತಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments