Publish Date: Mon, 30 Sep 2019 (17:15 IST)
Updated Date: Mon, 30 Sep 2019 (17:17 IST)
ಸರಕಾರದ ಮೇಲೆ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದವರು ಆಗ್ರಹ ಮಾಡಿದ್ದಾರೆ.
ವಿವಿಧ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದವರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಿದ್ರು.
ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರ ಹಾಕಿದರು. ಕೇಂದ್ರ ಸರಕಾರದ ಉದ್ದೇಶಿತ ಸಾಮಾಜಿಕ ಸುರಕ್ಷಾ (ಸಂಹಿತೆ) ಕಲ್ಯಾಣ ಮಸೂದೆ - 2019 ನ್ನು ಕೈ ಬಿಡಬೇಕು. ಕಟ್ಟಡ ಕಾರ್ಮಿಕ ಕಾನೂನು 1996, ಸೆಸ್ ಕಾನೂನು ಮತ್ತು ಕಟ್ಟಡ ಕಾರ್ಮಿಕ ಮಂಡಳಿ ಹಾಗೂ ಕಾರ್ಮಿಕರ ಬದುಕನ್ನು ರಕ್ಷಿಸಬೇಕೆಂದ್ರು.