Select Your Language

Notifications

webdunia
webdunia
webdunia
webdunia

ಜ್ಯೋತಿಷಿ ಮಾತು ಕೇಳಿ ಗಂಡನನ್ನೇ ಕೊಂದ ಲೇಡಿ ಎಸ್​ಐ!

Lady SI killed her husband after listening to an astrologer
bangalore , ಸೋಮವಾರ, 26 ಡಿಸೆಂಬರ್ 2022 (20:37 IST)
ಸಹಚರರೊಂದಿಗೆ ಸೇರಿ ತನ್ನಿಂದ ಬೇರ್ಪಟ್ಟ ಪತಿಯನ್ನು ಮಹಿಳಾ ಸಬ್​ ಇನ್ಸ್​ಪೆಕ್ಟರ್​, ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈನಲ್ಲಿ ಶನಿವಾರ ರಾತ್ರಿ ನಡೆದಿದೆ.ಚಿತ್ರಾ (47), ಉತ್ತಂಗರೈನ ಭಾರತೀಪುರಂ ಮೂಲದ ಎಂ ಸರೋಜಾ (37) ಮತ್ತು ಎಸ್. ವಿಜಯ ಕುಮಾರ್ (33) ಹಾಗೂ ತೂತುಕುಡಿಯ ರಾಜ ಪಾಂಡಿಯನ್ ಬಂಧಿತ ಆರೋಪಿಗಳು. ಉಳಿದ ಮೂವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ಇದಾದ ಬಳಿಕ ಚಿತ್ರಾ, ಹಸ್ತಸಾಮುದ್ರಿಕ ಸರೋಜಾ ಅವರನ್ನು ಭೇಟಿಯಾಗಿ, ತಮ್ಮ ಕುಟುಂಬದ ಸಮಸ್ಯೆಗಳನ್ನು ಹೇಳಿಕೊಂಡರು. ಈ ವೇಳೆ ಸರೋಜಾ, ಪತಿಯನ್ನು ಕೊಲೆ ಮಾಡುವಂತೆ ಚಿತ್ರಾಗೆ ಸೂಚಿಸಿದ್ದಳು. ಗಂಡನ ಕೊಲೆಗೆ ಆಳುಗಳನ್ನು ಕಳುಹಿಸುವುದಾಗಿ ಹೇಳಿ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಳು.ತನಿಖೆಯ ಭಾಗವಾಗಿ ಉತ್ತಂಗರೈ ಪೊಲೀಸರು ದಂಪತಿಯ 19 ವರ್ಷದ ಮಗ ಮತ್ತು ಕಮಲರಾಜ್‌ನನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಸೆಂಥಿಲ್‌ನನ್ನು ಕೊಲೆ ಮಾಡಿರುವುದಾಗಿ ಕೃಷ್ಣಗಿರಿ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ವಿಚಾರಣೆ ಬಳಿಕ ಶನಿವಾರ ಬಾವಿಯಿಂದ ಸೆಂಥಿಲ್ ಶವವನ್ನು ಪೊಲೀಸರು ಹೊರತೆಗೆದಿದ್ದಾರೆ.
 
ಆರೋಪಿ ಚಿತ್ರಾ, ಸರೋಜಾ, ವಿಜಯ ಕುಮಾರ್ ಮತ್ತು ರಾಜ ಪಾಂಡಿಯನ್ ಅವರನ್ನು ಶನಿವಾರ ರಾತ್ರಿ ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಿಲ್ಲಾಧಿಕಾರಿಗಳ ಹಾಡಿಗೆ ಎಸಿ, ತಹಶೀಲ್ದಾರ್ ಗಳ ಟಪ್ಪಾಂಗೊಚಿ